ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಷಿತರ ಅಭಿವೃದ್ಧಿಗೆ ಶ್ರಮಿಸಬೇಕು

Last Updated 15 ಜುಲೈ 2017, 10:48 IST
ಅಕ್ಷರ ಗಾತ್ರ

ಆನೇಕಲ್‌ : ಅಂಬೇಡ್ಕರ್‌ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಶೋಷಿತರ ಅಭಿವೃದ್ಧಿಗೆ ಕೆಲಸ ಮಾಡಬೇಕು. ಈ ಮೂಲಕ ಸಮಾನತೆಯ ಕನಸನ್ನು ಸಾಕಾರಗೊಳಿಸಬೇಕು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು. ಅವರು ಪಟ್ಟಣದ ಕೆಎಸ್‌್ಆರ್‌ಟಿಸಿ ಡಿಪೋನಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ಪರಿಶಿಷ್ಟ ಜಾತಿ ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆ ತರಲು ಸಂವಿಧಾನದಲ್ಲಿ ಹಲವಾರು ಸೌಲಭ್ಯಗಳನ್ನು ಕಲ್ಪಿಸಿಕೊಟ್ಟರು. ಹಕ್ಕು ಮತ್ತು ಕರ್ತವ್ಯಗಳ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸಲು ಸಂವಿಧಾನದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದರು.

ಮೀಸಲಾತಿಯು ಕೇವಲ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜೊತೆಗೆ ಹಿಂದುಳಿದ ವರ್ಗಗಳಿಗೂ ಮೀಸಲಾತಿ ಕಲ್ಪಿಸಿಕೊಟ್ಟರು ಎಂದರು. ಕೆಎಸ್‌ಆರ್‌ಟಿಸಿ ಬೆಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಘುನಾಥ್ ಮಾತನಾಡಿ ಎಲ್ಲಾ ಕಾರ್ಮಿಕರು ಯಾವುದೇ ಭೇದಭಾವವಿಲ್ಲದೇ ಕುಟುಂಬದಂತೆ ಸಾರ್ವಜನಿಕ         ಸೇವೆ ಸಲ್ಲಿಸಿ ತಮ್ಮ ಕರ್ತವ್ಯದಲ್ಲಿ ಬದ್ಧತೆಯನ್ನು ತೋರಬೇಕು ಎಂದು ಹೇಳಿದರು.

ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಡಾ.ವೆಂಕಟಸ್ವಾಮಿ, ವಿಭಾಗೀಯ ಕಾರ್ಯದರ್ಶಿ ಜಿ.ಸುಲೋಚನಾದೇವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಲಘುಮಯ್ಯ, ಪುರಸಭಾ ಸದಸ್ಯೆ ಮುನಿರತ್ನಮ್ಮ, ಪಿವಿಸಿ(ಎಸ್) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಆದೂರು ಪ್ರಕಾಶ್, ಮುಖಂಡರಾದ ಶೇಷಾದ್ರಪ್ಪ, ಶ್ರೀನಿವಾಸ್, ಗಂಗಪ್ಪ, ಅಳ್ಳಾಳ್ಳಪ್ಪ, ಪ್ರಭಾಕರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT