ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಬಾಳೆಹೊನ್ನೂರಿಗೆ ಜಯಪ್ರಕಾಶ್ ಹೆಗ್ಡೆ ಭೇಟಿ

Last Updated 16 ಜುಲೈ 2017, 5:19 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ರಾಜ್ಯದಾ ದ್ಯಂತ ನಡೆಯುತ್ತಿರುವ ವಿಸ್ತಾರಕರ ಅಭಿಯಾನದ ಪ್ರಯುಕ್ತ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿ ಸಲು ಭಾನುವಾರ ಬಾಳೆಹೊನ್ನೂರು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ  ಅಧ್ಯಕ್ಷ ಭಾಸ್ಕರ್ ವೆನಿಲ್ಲಾ ತಿಳಿಸಿದ್ದಾರೆ.

ಬಿದಿರೆ ಗ್ರಾಮದ ಕಾಲೋನಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.10 ಗಂಟೆಗೆ ಖಾಂಡ್ಯದಲ್ಲಿ ವೃಕ್ಷಾಂದೋಲನ, 11ಗಂಟೆಗೆ ಹುಯಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಮನೆ ಮನೆ ಹಾಗೂ ಕಾಲೋನಿ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಮಾಗುಂಡಿ ಮತ್ತು ಮಹಾಲ್ ಗೋಡಿನಲ್ಲಿರುವ ಹರಿಜನ ಕಾಲೋನಿಗಳಿಗೆ ಭೇಟಿ ನೀಡಿ, ಮೂರು ಗಂಟೆಗೆ ಮಾಗುಂಡಿಯ ಅಲ್ಪಸಂಖ್ಯಾತ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

3.30ಕ್ಕೆ ಬನ್ನೂರು ಗ್ರಾಮಕ್ಕೆ ಭೇಟಿ ನೀಡಿ ನಂತರ ರಂಭಾಪುರಿ ಪೀಠದಲ್ಲಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ  ಭಾಗವಹಿಸುವರು. ಸಂಜೆ 5.15ಕ್ಕೆ ಅಕ್ಷರ ನಗರದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT