ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಎಂಸಿ ಕಾಲೇಜಿಗೆ ಅಗತ್ಯ ಸೌಲಭ್ಯ

Last Updated 16 ಜುಲೈ 2017, 6:40 IST
ಅಕ್ಷರ ಗಾತ್ರ

ಮಡಿಕೇರಿ: ‘ವಿದ್ಯಾರ್ಥಿಗಳೂ ಸಹ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದು ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು.  ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ವತಿಯಿಂದ ಶನಿವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಎನ್‌ಸಿಸಿ, ಎನ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಸವಾಲು ಎದುರಿಸಲು ಸುಲಭವಾಗಲಿದೆ. ಉನ್ನತ ಶಿಕ್ಷಣ ಪಡೆಯುವುದರ ಜೊತೆಗೆ ಕ್ರೀಡೆ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವುದು ಅಗತ್ಯ ಎಂದು ಹೇಳಿದರು.

ಮಾಜಿ ರಾಷ್ಟ್ರಪತಿ ದಿವಂಗತ ಎ.ಪಿ.ಜೆ. ಅಬ್ದುಲ್ ಕಲಾಂ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2020ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು ಎಂದು ಕನಸು ಕಂಡಿದ್ದರು. ಆ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದರು; ಆ ಸಮಯ ಹತ್ತಿರವಾಗುತ್ತಿದ್ದು, ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಯುವಕರು ಕೈಜೋಡಿಸಬೇಕು. ದೇಶದ ಬದಲಾವಣೆ ಮತ್ತು ಸುಧಾರಣೆ ಯುವಜನರ ಶಕ್ತಿಯಾ ಗಿದೆ ಎಂದು ಶಾಸಕರು ಹೇಳಿದರು.

ಸಂವಿಧಾನದ ಆಶಯಕ್ಕೆ ಬದ್ಧರಾಗಿ ವಿದ್ಯಾರ್ಥಿಗಳು ನಡೆದುಕೊಳ್ಳಬೇಕು. ಜಾತಿ ಸಂಘರ್ಷಗಳಿಗೆ ಅವಕಾಶ ನೀಡ ಬಾರದು. ಸಂವಿಧಾನದ ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಕೋರಿದರು.  

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ಇನ್ನಷ್ಟು ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಗಳೂರು ವಿವಿ ಕುಲಪತಿಗಳೊಂದಿಗೆ ಚರ್ಚಿಸಲಾಗುವುದು. ಈ ಸಂಬಂಧ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಕನ್ಯಾಡಿ ಗ್ರಾಮದ ಸೇವಾ ಭಾರತಿ ಸಂಸ್ಥೆಯ ಕಾರ್ಯದರ್ಶಿ ಕೆ. ವಿನಾಯಕ ರಾವ್, ಪ್ರಾಂಶುಪಾಲರಾದ ಪಾರ್ವತಿ ಅಪ್ಪಯ್ಯ, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಗೀತಾ, ಬಿ.ಎಸ್.ಆನಂದ್, ಡಾ.ಮಾದವ ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT