ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ’

Last Updated 16 ಜುಲೈ 2017, 10:53 IST
ಅಕ್ಷರ ಗಾತ್ರ

ಸಿಂಧನೂರು: ‘ನಾಲ್ಕು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಶ್ರಮಿಸುತ್ತಿದೆ’ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ತಾಲ್ಲೂಕಿನ ಜಾಲಿಹಾಳ ಗ್ರಾಮದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ವರ್ಗ ಬಾಲಕಿಯರ ವಸತಿ ಶಾಲೆ ಉದ್ಘಾಟನೆ ಹಾಗೂ ₹1 ಕೋಟಿ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಹೈದರಾಬಾದ್ ಕರ್ನಾಟಕದ ಶೈಕ್ಷಣಿಕ ಪ್ರಗತಿಗೆ ಈ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಹಿಂದಿನ ಯುಪಿಎ ಸರ್ಕಾರ 371(ಜೆ) ಕಲಂ ಜಾರಿಗೊಳಿಸಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮತ್ತು ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವೀರಲಕ್ಷ್ಮಿ ಆದಿಮನಿ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿಯೂ ವಸತಿ ಶಾಲೆ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹ. ಸಿಸಿ ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಉತ್ತಮ ರಸ್ತೆ ನಿರ್ಮಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಅಮರೇಗೌಡ ವಿರೂಪಾಪುರ ಮಾತನಾಡಿ, ‘ಶಾಲೆಗಳನ್ನು ಮಂಜೂರು ಮಾಡುವುದಷ್ಟೇ ಅಲ್ಲದೆ ಅದಕ್ಕೆ ತಕ್ಕ ಸೌಲಭ್ಯ ಒದಗಿಸಿ, ಶಿಕ್ಷಕರನ್ನು ನಿಯೋಜಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜ ಹಿರೇಗೌಡರ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಂ.ಬಸಣ್ಣ, ಸದಸ್ಯ ಈಶ್ವರಗೌಡ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಬಸವರಾಜ ಪಲ್ಲೇದ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT