ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ರಾವಿಡ್, ಜಹೀರ್‌ಗೆ ಅವಮಾನ: ಗುಹಾ

Last Updated 16 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್ ಮತ್ತು ಜಹೀರ್ ಖಾನ್ ಅವರನ್ನು ಸಾರ್ವಜನಿಕವಾಗಿ ಅವಮಾನಿಸಲಾಗುತ್ತಿದೆ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ ಅವರನ್ನು ನೇಮಕ ಮಾಡಿದಾಗ ಜಹೀರ್ ಅವರನ್ನು ಬೌಲಿಂಗ್ ಕೋಚ್ ಮತ್ತು ದ್ರಾವಿಡ್ ಅವರನ್ನು ವಿದೇಶದ ಸರಣಿಗಳಲ್ಲಿ ಆಡುವ ಭಾರತ ತಂಡದ ಬ್ಯಾಟಿಂಗ್ ಸಲಹೆಗಾರನ್ನಾಗಿ ನೇಮಕ ಮಾಡಲಾಗಿತ್ತು.

ಆದರೆ ಶನಿವಾರ ನಡೆದಿದ್ದ ಸಭೆಯಲ್ಲಿ ಕ್ರಿಕೆಟ್ ಆಡಳಿತಾಧಿಕಾರಿಗಳ ಸಮಿತಿ (ಸಿಒಎ)ಯು ಶಾಸ್ತ್ರಿ ನೇಮಕವನ್ನು ಮಾನ್ಯ ಮಾಡಿತ್ತು. ಆದರೆ, ಜಹೀರ್ ಮತ್ತು ದ್ರಾವಿಡ್ ನೇಮಕ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಲಿಲ್ಲ. ಈ ಬೆಳವಣಿಗೆಯ ಕುರಿತು ಗುಹಾ ಟ್ವೀಟ್‌ ಮಾಡಿದ್ದಾರೆ.

‘ಮುಖ್ಯ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಅವರನ್ನು ಹೀನಾಯವಾಗಿ ನಡೆಸಿಕೊಳ್ಳಲಾಯಿತು. ಈಗ ಜಹೀರ್ ಮತ್ತು ದ್ರಾವಿಡ್ ವಿಷಯದಲ್ಲಿಯೂ ಅದೇ ರೀತಿಯ ಧೋರಣೆ ಅನುಸರಿಸಲಾಗುತ್ತಿದೆ’ ಎಂದು  ಹೇಳಿದ್ದಾರೆ.

‘ಕುಂಬ್ಳೆ, ದ್ರಾವಿಡ್ ಮತ್ತು ಜಹೀರ್ ಅವರು ಕ್ರಿಕೆಟ್‌ ಆಟದ ನಿಜವಾದ ದಿಗ್ಗಜರು. ಕ್ರೀಡೆಗೆ ಅವರು ನೀಡಿರುವ ಕಾಣಿಕೆ ಬಹಳ ದೊಡ್ಡದು. ಅವರನ್ನು ಅವಮಾನಿಸುವುದು ಸರಿಯಲ್ಲ’ ಎಂದಿದ್ದಾರೆ.

ಸಿಒಎ ಸದಸ್ಯರಾಗಿದ್ದ ಗುಹಾ ಅವರು ಕೆಲವು ದಿನಗಳ ಹಿಂದೆ ರಾಜೀನಾಮೆ ನೀಡಿದ್ದರು. ಭಾರತದ ಕ್ರಿಕೆಟ್‌ನಲ್ಲಿ ‘ತಾರಾ ಸಂಸ್ಕೃತಿ’ಯಿಂದಾಗಿ  ಹಿತಾಸಕ್ತಿ ಸಂಘರ್ಷ ನಡೆಯುತ್ತಿದೆ ಎಂದು  ಖಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT