ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೇಂದ್ರ ಸರ್ಕಾರದಿಂದ ಪೊಳ್ಳು ಭರವಸೆ’

Last Updated 17 ಜುಲೈ 2017, 6:28 IST
ಅಕ್ಷರ ಗಾತ್ರ

ಹಿರೇಬಾಗೇವಾಡಿ: ‘ಕೇಂದ್ರ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತ ಜನರನ್ನು ಯಾಮಾರಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿಯ ಪಡಿಬಸವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳಕರ ಯುವಶಕ್ತಿ ಸಂಘಟನೆ ಉದ್ಘಾಟಿಸಿ ಅವರು ಮಾತನಾಡಿದರು.

‘ಬಿಜೆಪಿಯವರು ಕಳೆದ ಮೂರು ವರ್ಷದ ಅವಧಿಯಲ್ಲಿ ತಾವು ಅಗಾಧವಾದ ಸಾಧನೆ ಮಾಡಿದವರಂತೆ ಪ್ರಚಾರ ಮಾಡುತ್ತಿದ್ದಾರೆ. ಅವರು ಕುತಂತ್ರವಾದಿಗಳು. ಸಮಾಜದಲ್ಲಿ ಒಗ್ಗಟ್ಟಾಗಿರುವ ಎಲ್ಲ ಜನರ ಮನಸ್ಸುಗಳನ್ನು ಒಡೆದು ರಾಜಕೀಯ ಮಾಡುತ್ತಾರೆ. ಜಾತಿ ವಾದದಿಂದ ರಾಜಕೀಯ ಮಾಡುವುದು ಸರಿಯಲ್ಲ. ಸ್ಥಳೀಯ ಶಾಸಕರು ಜನಪರವಾದ ಕೆಲಸಗಳನ್ನು ಮಾಡಿಲ್ಲ. ಆದರೆ ಅಧಿಕಾರವಿಲ್ಲದಿದ್ದರೂ ಗ್ರಾಮೀಣ ಭಾಗದ ಜನರ ಹಿತಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ ಸದಾ ದುಡಿಯುತ್ತಿದ್ದಾರೆ. ಈ ಬಾರಿ ಅವರನ್ನು ಶಾಸಕರನ್ನಾಗಿ ಆರಿಸಿ’ ಎಂದರು.

ರಾಜ್ಯ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಸಂಘಗಳನ್ನು ಸಮಾಜದ ಸೇವೆಗಾಗಿ ಮುಡುಪಾಗಿಡಿ. ಸಾಮಾಜಿಕ ಕಳಕಳಿಯೊಂದಿಗೆ ಕೆಲಸಗಳನ್ನು ಮಾಡಿ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಸುಧಾರಣೆಗಳಾಗಿಲ್ಲ, ಯುವಕರಲ್ಲಿ ನಿರುದ್ಯೋಗ ಸಮಸ್ಯೆ  ಕಾಡುತ್ತಿದೆ. ಗ್ರಾಮೀಣ ಶಾಸಕರು ಇದರ ಬಗ್ಗೆ ಗಮನ ಹರಿಸಬೇಕಿತ್ತು ಅಧಿಕಾರವಿದ್ದರೂ ಏಕೆ ಕೆಲಸ ಮಾಡುತ್ತಿಲ್ಲ’ ಅಂದರು.

ತಾಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿದರು.  ಜಿಲ್ಲಾ ಕಾಂಗ್ರೆಸ್ ಕಮೀಟಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಮಾಜಿ ಕಾಡಾ ಅಧ್ಯಕ್ಷ ಅಡಿವೇಶ ಇಟಗಿ, ಮಾಜಿ ಬುಡಾ ಅಧ್ಯಕ್ಷ ಯುವರಾಜ ಕದಂ, ಬಿ.ಎನ್. ಪಾಟೀಲ ಮಾತನಾಡಿ, ನೂತನ ಯುವಶಕ್ತಿ ಸಂಘಟನೆಯನ್ನು ಬೆಳಿಸಿಕೊಂಡು ಸಮಾಜದಲ್ಲಿನ ಭೃಷ್ಟಾಚಾರಗಳನ್ನು ನಿಯಂತ್ರಿಸುವ ಕಾರ್ಯವನ್ನು ಸಂಘದ ಪದಾಧಿಕಾರಿಗಳು ಮಾಡ ಬೇಕೆಂದು ಸಲಹೆ ನೀಡಿದರು.

ಬಿಜೆಪಿ ಆಡಳಿತಕ್ಕೆ ಬೇಸತ್ತು ಸ್ವಇಚ್ಛೆಯಿಂದ ಕಾಂಗ್ರೆಸ್ ಸೇರ್ಪಡೆಗೊಂಡವರನ್ನು ಸಚಿವ ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ಮುತ್ನಾಳ ಹಿರೇಮಠದ ಶಿವಾನಂದ ಸ್ವಾಮಿಗಳು, ಬೆಳಗಾವಿ ಕಾರಂಜಿಮಠದ ಗುರುಸಿದ್ದ ಸ್ವಾಮಿಗಳು, ಕಾದ್ರಿ ದರ್ಗಾದ ಅಶ್ರಫಅಲಿ ಕಾದ್ರಿ ಅಜ್ಜನವರು ಸಾನ್ನಿಧ್ಯ ವಹಿಸಿದ್ದರು.
ತಾ.ಪಂ. ಅಧ್ಯಕ್ಷ ಶಂಕರಗೌಡಾ ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ, ಮಾಜಿ ಕಾಡಾ ಅಧ್ಯಕ್ಷ ಅಡಿವೇಶ ಇಟಗಿ, ಮಾಜಿ ಬುಡಾ ಅಧ್ಯಕ್ಷ ಮತ್ತು ಉಚಗಾವಿ ಎಪಿಎಂಸಿ ಸದಸ್ಯ ಯುವರಾಜ ಕದಂ, ಯೂತ್‌ ಕಾಂಗ್ರೆಸ್‌ ಉಪಾಧ್ಯಕ್ಷ ಮೃಣಾಲ ಹೆಬ್ಬಾಳಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT