ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ

Last Updated 17 ಜುಲೈ 2017, 6:39 IST
ಅಕ್ಷರ ಗಾತ್ರ

ಹಾವೇರಿ: ‘ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಸರಣಿ ಕೊಲೆಯಿಂದ ಪ್ರಕ್ಷುಬ್ಧ ವಾತಾವರಣ  ನಿರ್ಮಾಣವಾಗಿದ್ದು, ಶಾಂತಿ ಕಾಪಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ನಾಗರಾಜ ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರಾವಳಿ ಜಿಲ್ಲೆಗಳ ಆರ್‌ಎಸ್‌ಎಸ್‌, ಹಿಂದೂ ಜಾಗರಣ ವೇದಿಕೆ, ಬಜರಂಗದಳ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಸರಣಿ ಕೊಲೆಗಳು ನಡೆಯುತ್ತಿವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನರು ಅಪರಾಧಿಗಳ ಬಂಧನಕ್ಕೆ ಕ್ರಮ ವಹಿಸುವ ಬದಲಾಗಿ, ನಿರಪರಾಧಿ ಕಾರ್ಯಕರ್ತರನ್ನೇ ಬಂಧಿಸುವ ಕಾರ್ಯ ಮಾಡಿಸುತ್ತಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ ಸರ್ಕಾರದ ನ್ಯಾಯ ಪದ್ಧತಿಯೇ’ ಎಂದು ಪ್ರಶ್ನಿಸಿದರು.

‘ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಸರಣಿ ಕೊಲೆಗಳು ಹಾಗೂ ರಾಜ್ಯ ಸರ್ಕಾರದ ವೈಫಲ್ಯದ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಇದೇ 17ರಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರ ನೇತೃತ್ವದಲ್ಲಿ 17 ಸಂಸದರು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಲಿದ್ದಾರೆ’ ಎಂದರು.

‘ಪರಪ್ಪನ ಅಗ್ರಹಾರದಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್‌ ಅಧಿಕಾರಿಗಳ ಮಧ್ಯೆ ನಡೆಯುತ್ತಿರುವ ವಾಕ್ಸಮರವನ್ನು ಮುಖ್ಯಮಂತ್ರಿಗಳು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದಾರೆ. ಪೊಲೀಸ್‌ ಇಲಾಖೆಯ ಮೇಲೆ ಮುಖ್ಯಮಂತ್ರಿಗಳಿಗೆ ಹಿಡಿತ ಇಲ್ಲವೇ?’ ಎಂದರು.

‘ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಶಾಲಾ–ಕಾಲೇ ಜುಗಳ ಕುರಿತು ವರದಿ ಕೊಡಿ. ಅವರನ್ನು ನಾನು ನೋಡಿಕೊಳ್ಳುತ್ತೇನೆ’ ಎಂದು ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಈಚೆಗೆ ಹೇಳಿಕೆ ನೀಡಿದ್ದಾರೆ’ ಎಂದ ಎಂ. ನಾಗರಾಜ, ‘ವೇಣುಗೋಪಾಲ್‌ ಅವರೇ, ಇದು ಕೇರಳ ಅಲ್ಲ. ಕರ್ನಾಟಕಕ್ಕೆ ತನ್ನದೇ ಆದ ಆಡಳಿತ ವ್ಯವಸ್ಥೆ ಇದೆ. ಕರ್ನಾಟಕದ ವಿದ್ಯಾರ್ಥಿಗಳು ರಾಜ್ಯದ ಶಕ್ತಿ. ಕಾಂಗ್ರೆಸ್‌, ಕರಾವಳಿ ಜಿಲ್ಲೆಗಳಲ್ಲಿ ಮುಸ್ಲಿಂ ಸಮುದಾಯವನ್ನು ಚುನಾವಣೆಯ ಗಾಳವನ್ನಾಗಿ ಮಾಡಿಕೊಳ್ಳುತ್ತಿವೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಕೈಗೊಂಡ ಅಭಿವೃದ್ಧಿ ಯೋಜನೆಗಳಿಂದ ಭಾರತವು  ಅಭಿವೃದ್ಧಿಯತ್ತ ಸಾಗುತ್ತಿದೆ’ ಎಂದು ಹಾರ್ವಡ್‌ ವಿಶ್ವವಿದ್ಯಾಲಯ ಸಮೀಕ್ಷೆ ತಿಳಿಸಿದೆ. ಪಂಡಿತ್‌ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮಶತಾಬ್ದಿ ವರ್ಷದ ನಿಮಿತ್ತ ಜಿಲ್ಲೆಯಾದ್ಯಂತ ಒಟ್ಟು 1,406 ಬೂತ್‌ಗಳಲ್ಲಿ ‘ವಿಸ್ತಾರಕ ಕಾರ್ಯಕರ್ತರ ಸಭೆ’ಯನ್ನು ನಡೆಸಲಾಗಿದೆ. ಬಿಜೆಪಿ ರಾಷ್ಟ್ರ ಘಟದ ಅಧ್ಯಕ್ಷ ಅಮಿತ್‌ ಷಾ ಅವರು ಆಗಸ್ಟ್ 12, 13 ಮತ್ತು 14ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ’ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಸಜ್ಜನರ, ಮಾಜಿ ಶಾಸಕ ಪಿ.ಬಿ.ಹರೀಶ, ಸುರೇಶ ಹೊಸ್ಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT