ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗರ್‌ಹುಕುಂ ಸಾಗುವಳಿದಾರರಿಗೆ ಭೂಮಿ

Last Updated 17 ಜುಲೈ 2017, 7:30 IST
ಅಕ್ಷರ ಗಾತ್ರ

ಹೊಸಪೇಟೆ: ‘ಅರಣ್ಯ ಭೂಮಿ ಮತ್ತು ಬಗರ್‌ ಹುಕುಂ ಭೂಮಿ ಸಾಗುವಳಿ ದಾರರಿಗೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ತಲಾ ಎರಡು ಎಕರೆ ಭೂಮಿ ನೀಡಿ, ಪಟ್ಟಾ ಕೊಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಭರವಸೆ ನೀಡಿದರು. ನಗರದ ಅಮರಾವತಿ ಅತಿಥಿಗೃಹ ದಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರಿಗೆ ಈ ಭರವಸೆ ನೀಡಿದರು.

‘ತಾಲ್ಲೂಕಿನ ಪಾಪಿನಾಯಕನಹಳ್ಳಿ ಸರ್ವೇ ಸಂಖ್ಯೆ 148, 238, 361,338, 368 ಹಾಗೂ ಕಮಲಾಪುರ, ಚಿನ್ನಾ ಪುರ, ನಲ್ಲಾಪುರ ಮತ್ತು ಗುಂಡ್ಲವ ದ್ದಿಗೇರಿಯಯಲ್ಲಿ ಸರ್ವೇ ಸಂಖ್ಯೆ 800ರಿಂದ 1,500ರಲ್ಲಿ ಉಳುಮೆಗೆ ಶೀಘ್ರದಲ್ಲೇ ಭೂಮಿ ಕೊಡಲಾಗುವುದು. ಕಾನೂನಾತ್ಮಕ ಸಮಸ್ಯೆಗಳನ್ನು ಬಗೆಹರಿಸಿ, ಜಮೀನು ಹಸ್ತಾಂತರಿಸ ಬೇಕು’ ಎಂದು ಸ್ಥಳದಲ್ಲಿದ್ದ ಉಪವಿಭಾ ಗಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರಿಗೆ ಸೂಚನೆ ನೀಡಿದರು.

‘ರೈತರ ಹಲವು ದಿನಗಳ ಬೇಡಿಕೆ ಈಡೇರಿಸಿದ್ದು ಸಂತಸ ತಂದಿದೆ. ರೈತರ ಸಮಸ್ಯೆಗೆ ಸ್ಪಂದಿಸಿರುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ತಿಳಿಸುತ್ತೇವೆ’ ಎಂದು ರೈತ ಸಂಘದ ಮುಖಂಡ ಪರಶುರಾಮ ತಿಳಿಸಿದರು.

‘ಬಿ ಫಾರಂ ಕೊಟ್ಟವರಿಗೆ ಬೆಂಬಲಿಸಿ’: ‘ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ವಿಜಯನಗರ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಯಾರಿಗೆ ‘ಬಿ’ ಫಾರಂ ನೀಡುತ್ತದೋ ಅಂತಹವರ ಗೆಲುವಿಗೆ ಎಲ್ಲರೂ ಶ್ರಮಿಸುವ ತೀರ್ಮಾ ನವನ್ನು ಬ್ಲಾಕ್‌ ಕಾಂಗ್ರೆಸ್‌ ಸಭೆ ತೆಗೆದು ಕೊಂಡಿದೆ. ಇದು ನಿಜಕ್ಕೂ ಖುಷಿಯ ವಿಚಾರ. ಇತರ ಬ್ಲಾಕ್‌ ಕಾಂಗ್ರೆಸ್‌ ಘಟಕಗಳು ಒಂದೇ ಮನಸ್ಸಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

ಅಮರಾವತಿ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಬ್ಲಾಕ್‌ ಕಾಂಗ್ರೆಸ್‌ ಕಾರ್ಯ ಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತ ನಾಡಿದರು. ‘ಒಂದು ಕ್ಷೇತ್ರದಿಂದ ಟಿಕೆಟ್‌ ಬಯಸಿ ಕನಿಷ್ಠ ಹತ್ತರಿಂದ ಹದಿನೈದು ಜನ ಅರ್ಜಿ ಸಲ್ಲಿಸಿರುತ್ತಾರೆ. ಅದರಲ್ಲಿ ಯಾರಿಗಾ ದರೂ ಒಬ್ಬರಿಗೆ ಮಾತ್ರ ಟಿಕೆಟ್‌ ಸಿಗುತ್ತದೆ. ಯಾರಿಗೆ ಟಿಕೆಟ್‌ ಸಿಕ್ಕರೂ ಉಳಿದ ವರೆಲ್ಲರೂ ಅವರ ಗೆಲುವಿಗೆ ಶ್ರಮಿಸಬೇಕು. ಪ್ರತಿ ತಿಂಗಳು ಬ್ಲಾಕ್‌ ಕಾಂಗ್ರೆಸ್‌ ಸಭೆ ಕರೆಯಬೇಕು. ಹೊಸ ಕಚೇರಿ ಆರಂಭಿಸಲು ಎಲ್ಲ ರೀತಿಯ ನೆರವು ನೀಡಲಾಗುವುದು’ ಎಂದು ಭರವಸೆ ನೀಡಿದರು.

ಜಿ.ಪಂ.ಸದಸ್ಯ ಪ್ರವೀಣ್‌ ಸಿಂಗ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತಾರಿಹಳ್ಳಿ ಶಿವಮೂರ್ತಿ, ಮುಖಂಡರಾದ ಎಲ್‌. ಸಿದ್ಧನಗೌಡ, ಅಯ್ಯಾಳಿ ತಿಮ್ಮಪ್ಪ, ಗುಜ್ಜಲ ನಾಗರಾಜ, ಗುಜ್ಜಲ ರಘು, ಮಹಮ್ಮದ್‌ ಇಮಾಮ್‌ ನಿಯಾಜಿ, ಸಾಲಿ ಸಿದ್ದಯ್ಯ ಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT