ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಏಕೆ ಹಿಂದೆ?

Last Updated 17 ಜುಲೈ 2017, 19:30 IST
ಅಕ್ಷರ ಗಾತ್ರ

ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರು, ಬೀದರ್ ಜಿಲ್ಲೆಯಲ್ಲಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಸೂಚನೆ ಕೊಟ್ಟಿರುವ ಸುದ್ದಿ  (ಪ್ರ.ವಾ., ಜುಲೈ 8) ಓದಿ ಮನಸ್ಸಿಗೆ ಕಳವಳವಾಯಿತು. ಕೆಲವು ಜಿಲ್ಲೆಗಳಲ್ಲಿ ಅನುದಾನ ಬಳಸಿ ಆಗಿದೆ. ಇನ್ನೂ ಒಂದಷ್ಟು ಕೊಡಿ ಎಂದು ಅವರು ಕೇಳುತ್ತಿದ್ದಾರೆ. ಆದರೆ, ನಮ್ಮ ಬೀದರ್‌ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹೀಗೇಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ?

ಹೆಚ್ಚಿನ ಅಧಿಕಾರಿಗಳು ಈ ಭಾಗದವರೇ ಇದ್ದರೂ ‘ನಮ್ಮದು’ ಎಂಬ ಭಾವನೆ ಇಲ್ಲದೆ, ಕಾಮಗಾರಿಗಳ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ನೋಡಿದರೆ ಬೇಸರವಾಗುತ್ತದೆ.

ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ಹಿಡಿತ ಪಡೆದು ಲಭ್ಯ ಅನುದಾನವನ್ನು ಕಾಲಮಿತಿಯೊಳಗೆ ಬಳಸಿಕೊಂಡು,  ಮತ್ತಷ್ಟು ಬೇಕು ಎಂದು ಬೇಡಿಕೆ ಇಡುವ ರೀತಿ ಕೆಲಸ ಮಾಡಿದರೆ  ಈ ಭಾಗದ ಅಭಿವೃದ್ಧಿ ಸಾಧ್ಯ. ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿದ್ದೇವೆ. ಎಲ್ಲಿ ಎಡವಿದ್ದೇವೆ ಎಂಬುದನ್ನು ಗುರುತಿಸಬೇಕು. ನ್ಯೂನತೆಗಳನ್ನು ಸರಿಪಡಿಸಬೇಕು.

-ಎಸ್.ಎಸ್. ಹೊದಮನಿ, ಬೀದರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT