ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಅಭಿವೃದ್ಧಿಗೆ ಸಹಕರಿಸಲು ಸಲಹೆ

Last Updated 18 ಜುಲೈ 2017, 5:26 IST
ಅಕ್ಷರ ಗಾತ್ರ

ರಾಯಚೂರು: ‘ಪ್ರಧಾನಿ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಅವರಿಗೆ ಮನವರಿಕೆ ಮಾಡಿಕೊಡಿ’ ಎಂದು ಬಿಜೆಪಿ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ರವಿಕುಮಾರ ಹೇಳಿದರು. ನಗರದ ಬಸನಬಾವಿ ವೃತ್ತದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ಅವರು ಸ್ವಚ್ಛ ಭಾರತ ಅಭಿಯಾನ ಆರಂಭಿಸುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಇದರಿಂದ ಪ್ರತಿಯೊಬ್ಬರಲ್ಲಿ ಸ್ವಚ್ಛತೆ ಅರಿವು ಮೂಡಿದೆ ಎಂದರು. ಪರಿಸರ ಸಂರಕ್ಷಣೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿದ್ದು, ಪರಿಸರ ಕಾಪಾಡಲು ಪ್ರತಿಯೊಬ್ಬರು ಮುಂದಾಗಬೇಕು. ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಹಾಗೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರ ಕಾಪಾಡಿದರೆ ಮಳೆಯೂ ಉತ್ತಮವಾಗಿ ಬರಲಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಘಟಕ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ, ಮುಖಂಡರಾದ ಎ.ಪಾಪಾರೆಡ್ಡಿ, ದೊಡ್ಡ ಮಲ್ಲೇಶಪ್ಪ, ಶಶಿರಾಜ ಮಸ್ಕಿ, ನರಸಪ್ಪ ಜೇಗರಕಲ್, ಟಿ.ಮಲ್ಲೇಶ, ಗುಡ್ಸಿ ನರಸರೆಡ್ಡಿ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಅಧ್ಯಕ್ಷ ಉಟ್ಕೂರು ರಾಘವೇಂದ್ರ, ಚೇತನರೆಡ್ಡಿ, ಸಂದೀಪ್ ಸಿಂಗನೊಡಿ, ಮಹೇಂದ್ರರೆಡ್ಡಿ, ವಿಠ್ಠಲರೆಡ್ಡಿ, ಉಪ್ಪೇಟ್ ನರಸರೆಡ್ಡಿ ಭಾಗವಹಿಸಿದ್ದರು.

ಗಿಲ್ಲೆಸೂಗುರು: ಪಂಡಿತ ದೀನದಯಾಳ್‌ ಉಪಾಧ್ಯಾಯ ಜನ್ಮ ಶತಾಬ್ದಿ ಅಂಗವಾಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗಿಲ್ಲೆಸೂಗೂರು ಹೋಬಳಿಯಲ್ಲಿ ವಿಸ್ತಾರಕರ ಸಭೆ ಸೋಮವಾರ ಹಮ್ಮಿಕೊಳ್ಳಲಾಯಿತು. ಸಭೆ ಉದ್ಘಾಟಿಸಿದ ಬಿಜೆಪಿ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ರವಿಕುಮಾರ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಮಾಜಿ ವಿಧಾನ ಪರಿಷತ್‌ ಸದಸ್ಯ ಮೃತ್ಯುಂಜಯ ಜಿನಗಾ, ರಾಜ್ಯ ಘಟಕ ಉಪಾಧ್ಯಕ್ಷ ನಾಗರತ್ನ ಕುಪ್ಪಿ, ಜಿಲ್ಲಾ ಘಟಕ ಅಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಎನ್‌.ಶಂಕರಪ್ಪ, ಎ.ಪಾಪಾರೆಡ್ಡಿ, ಬಸನಗೌಡ ಬ್ಯಾಗವಾಟ್‌, ಸತೀಶಕುಮಾರ, ಹಂಪನಗೌಡ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT