ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪಾಟ್‌ ಫಿಕ್ಸಿಂಗ್‌: ಸಮಿ, ಅಕ್ಮಲ್ ಹೆಸರು

Last Updated 18 ಜುಲೈ 2017, 19:30 IST
ಅಕ್ಷರ ಗಾತ್ರ

ಕರಾಚಿ : ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ನಡೆದಿದೆ ಎನ್ನಲಾಗುವ ಸ್ಪಾಟ್ ಫಿಕ್ಸಿಂಗ್‌ ವಿವಾದದಲ್ಲಿ ವೇಗದ ಬೌಲರ್‌ ಮುಹಮ್ಮದ್ ಸಮಿ ಮತ್ತು ಬ್ಯಾಟ್ಸ್‌ಮನ್‌ ಉಮರ್ ಅಕ್ಮಲ್ ಅವರ ಹೆಸರು ಕೇಳಿ ಬಂದಿದೆ.

ಈ ವಿಷಯ ಪಾಕಿಸ್ತಾನದ ಮಾಧ್ಯಮಗಳಲ್ಲಿ ಮಂಗಳವಾರ ಬಿತ್ತರವಾಗಿದೆ. ಸ್ಪಾಟ್ ಫಿಕ್ಸಿಂಗ್‌ಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಮೂವರನ್ನು ಒಳಗೊಂಡ ಸಮಿತಿಗೆ ರಾಷ್ಟ್ರೀಯ ಅಪರಾಧ ಏಜೆನ್ಸಿ ಈ ಕುರಿತು ಮಾಹಿತಿ ನೀಡಿದ್ದು ವಿಡಿಯೊ ತುಣುಕನ್ನು ಕೂಡ ಹಸ್ತಾಂತರ ಮಾಡಿದೆ ಎಂದು ತಿಳಿದು ಬಂದಿದೆ. 

ಸ್ಥಳೀಯ ಪತ್ರಿಕೆಯೊಂದರ ಜೊತೆ ಮಾತನಾಡಿದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್‌ ಕೂಡ ಇವರಿಬ್ಬರ ಹೆಸರನ್ನು ಉಲ್ಲೇಖಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT