ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Last Updated 19 ಜುಲೈ 2017, 9:09 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ರಾಮಾನುಜಾಚಾ ರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ವೈಷ್ಣವ ಮಹಾಸಭಾ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು  ಆಜಾದ್‌ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೆರವಣಿಗೆ ಯಲ್ಲಿ ರಾಜ್ಯಸರ್ಕಾರದ ವಿರುದ್ಧ  ಘೋಷಣೆ ಕೂಗಿದರು.

ಮಹಾಸಭಾದ ಸಂಚಾಲಕ ಸಾಲುಕಟ್ಟೆ ಶ್ರೀನಿವಾಸ್ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಲ್ವರ್ಗ ಮತ್ತು ಕೆಳವರ್ಗದ ಹೆಸರಿನಲ್ಲಿ ಜಾತಿಗಳನ್ನು ಒಡೆಯುತ್ತಿದ್ದಾರೆ. ಸಮಾ ನತೆಗೆ ಒತ್ತು ನೀಡಿದ ರಾಮಾನುಜಾ ಚಾರ್ಯರ ಸಹಸ್ರಮಾನೋತ್ಸವ ಆಚರಣೆಯನ್ನು ಕಡೆಗಣಿಸಲಾಗಿದೆ. ಅರ್ಚಕ ವೃತ್ತಿಯಿಂದ ಜೀವನ ಸಾಗಿಸು ತ್ತಿರುವ ವೈಷ್ಣವ ಸಮುದಾಯವನ್ನು ಮೂಲೆ ಗುಂಪುಮಾಡಿದ್ದಾರೆ’ ಎಂದು ದೂರಿದರು.

ರಾಜ್ಯ ಸರ್ಕಾರದ ವತಿಯಿಂದ ರಾಮಾನುಜಾಚಾರ್ಯರ ಜಯಂತ್ಯು ತ್ಸವವನ್ನು ಆಚರಿಸಬೇಕು. ವೈಷ್ಣವ ಜನಾಂಗಕ್ಕೆ ಆರ್ಥಿಕತೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಹಾಗೂ ಅಲ್ಪಸಂಖ್ಯಾತರೆಂದು ಪರಿಗಣಿಸಬೇಕು. ಸರ್ಕಾರದಿಂದ ನಿವೇಶನ ಮತ್ತು ಮನೆ ಒದಗಿಸಬೇಕು. ಜಿಲ್ಲಾ ಕೇಂದ್ರಗಳಲ್ಲಿ ಆಗಮ ಪಾಠಶಾಲೆ ತೆರೆಯಬೇಕು, ರಾಮಾನುಜ ಭವನ ನಿರ್ಮಿಸಬೇಕು, ಸಮುದಾಯದ ಅರ್ಚಕರಿಗೆ ಕೂಡಲೇ ತಸ್ತಿಕ್ ಹಣ ನೀಡಬೇಕು, ಯತಿರಾಜ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾಪನೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 10 ಎಕರೆ ಜಾಗ ನೀಡಬೇಕು. ವೈಷ್ಣವ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸಮುದಾಯದವರು ಮುಂದಿನ ಚುನಾವಣೆಯನ್ನು ಬಹಿಷ್ಕರಿಸಲಿದ್ದಾರೆ ಎಂದು ಎಚ್ಚರಿಸಿದರು.  ವೈಷ್ಣವ ಸಭಾದ ಕಡೂರು ತಾಲ್ಲೂಕು ಅಧ್ಯಕ್ಷ ಹನುಮಂತರಾಯ, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್,  ವಸಂತ ಕುಮಾರ್, ರಘು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT