ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗೃತಿಯಿಂದ ನಿಯಂತ್ರಣ ಸಾಧ್ಯ: ಡಾ. ರವಿ

Last Updated 19 ಜುಲೈ 2017, 9:20 IST
ಅಕ್ಷರ ಗಾತ್ರ

ಮಂಗಳೂರು: ಪ್ರತಿಯೊಂದು ಮನೆ ಧೂಮಪಾನ ಮುಕ್ತವಾಗಬೇಕು. ಈ ನಿಟ್ಟಿನಲ್ಲಿ ನಾಗರಿಕರು ಕಾರ್ಯೋನ್ಮುಖರಾಗಬೇಕು. ಜನರು ಜಾಗೃತರಾದಲ್ಲಿ ದುಶ್ಚಟಗಳನ್ನು ಸಂಪೂರ್ಣ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಎಂ.ಆರ್‌.ರವಿ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎ.ಜೆ. ದಂತ ವಿಜ್ಞಾನ ಮಹಾವಿದ್ಯಾಲಯಗಳ ಆಶ್ರಯದಲ್ಲಿ ನಗರದ ಎ.ಜೆ. ಸಂಸ್ಥೆ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಧೂಮಪಾನ ಮುಕ್ತ ಮನೆ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಸವಾಲಾಗಿ ಪರಿಣಮಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ ಬಳಿಕ, ಧೂಮಪಾನ ಸಾಕಷ್ಟು ಹತೋಟಿಗೆ ಬಂದಿದೆ. ಇನ್ನೂ ಜಾಗೃತಿಯ ಅವಶ್ಯಕತೆ ಇದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಈ ಕಾರ್ಯಕ್ರಮವನ್ನು ವಿಸ್ತರಿಸುವ ಅವಶ್ಯಕತೆ ಇದೆ. ಇದಕ್ಕಾಗಿ ಎ.ಜೆ. ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಮಾಹಿತಿ ನೀಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ. ನವೀನ್‌ಚಂದ್ರ, ಈ ಕಾರ್ಯಕ್ರಮವು ಪ್ರಥಮ ಹಂತದಲ್ಲಿ ಮಂಗಳೂರು ತಾಲ್ಲೂಕಿನ 31 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಎರಡು ಸಮುದಾಯ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಆರಂಭವಾಗಲಿದೆ ಎಂದು ತಿಳಿಸಿದರು.

ಈ ಯೋಜನೆಯಡಿ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಜಾಗೃತಿ ಅಭಿಯಾನ ನಡೆಯಲಿದ್ದು, ಆಶಾ ಕಾರ್ಯಕರ್ತೆಯರ ಮೂಲಕ ಎ.ಜೆ. ದಂತ ವಿಜ್ಞಾನ ಸಂಸ್ಥೆಯ ವೈದ್ಯರು, ಆಪ್ತ ಸಮಾಲೋಚಕರು, ವಿದ್ಯಾರ್ಥಿಗಳು ತಾಲ್ಲೂಕಿನ ಮನೆಗಳಿಗೆ ಭೇಟಿ ನೀಡಿ, ಧೂಮಪಾನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.

ಲಕ್ಷ್ಮಿ ಮೆಮೋರಿಯಲ್‌ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಜೇಶ್‌ ಬಿ.ವಿ., ಪ್ರಾಂಶುಪಾಲ ಡಾ. ವೈ. ಭರತ್‌ ಶೆಟ್ಟಿ, ಉಪ ಪ್ರಾಂಶುಪಾಲ ಡಾ. ರಾಘವೇಂದ್ರ ಕಿಣಿ ವೇದಿಕೆಯಲ್ಲಿದ್ದರು. ಎ.ಜೆ. ದಂತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ವಿಜಯ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶ್ರೇಷ್ಠಾ ಪರಿಚಯಿಸಿದರು.  ಧೂಮಪಾಲ ಸೇವನೆಯ ದುಶ್ಚಟಗಳ ಬಗ್ಗೆ ಜನಜಾಗೃತಿ ಮೂಡಿಸುವ ಮಾಹಿತಿ ಕರಪತ್ರಗಳನ್ನು ಡಾ. ಎಂ.ಆರ್‌. ರವಿ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT