ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ಅಪರಾಧಗಳ ಮೇಲೆ ನಿಗಾವಹಿಸಿ

Last Updated 19 ಜುಲೈ 2017, 10:29 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಅಬಕಾರಿ ಅಪರಾಧ ಗಳ ಮೇಲೆ ಹೆಚ್ಚು ನಿಗಾ ವಹಿಸುವಂತೆ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ– ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿದ ಅವರು, ಅಕ್ರಮ ಮದ್ಯ ತಯಾರಿಕೆ ಅಥವಾ ಸಾಗಟ, ಮಾರಾಟ ನಿಯಂತ್ರಿಸುವಂತೆ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮದ್ಯಪಾನ ಮತ್ತು ಮಾದಕ ದ್ರವ್ಯ ಚಟದಿಂದ ದೂರ ಉಳಿಯುವಂತೆ ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಬೇಕು. ಗ್ರಾಮ ಮಟ್ಟದಲ್ಲಿಯೂ ಅರಿವು ಮೂಡಿಸ ಬೇಕು. ಯಾವುದೇ ಅಕ್ರಮಗಳಿಗೆ ಪ್ರೋತ್ಸಾಹ ನೀಡದಂತೆ ಹಾಗೂ ಅಂತಹ ಚಟುವಟಿಕೆಗಳಲ್ಲಿ ತೋಡಗುವವರ ವಿರುದ್ಧ ಅಬಕಾರಿ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡುವಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಯಾವುದೇ ಕಾನೂನುಗಳಿದ್ದರೂ ಸಾರ್ವಜನಿಕರ ಮನಪರಿವರ್ತನೆ, ಸಹಭಾಗಿತ್ವ ಮತ್ತು ಸಹಕಾರ ಮುಖ್ಯ. ಈ ಬಗ್ಗೆ ವಿವಿಧ ಇಲಾಖೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಶಾಲೆ, ಕಾಲೇಜು, ದೇವಸ್ಥಾನ, ಆಸ್ಪತ್ರೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಮದ್ಯದಂಗಡಿ ಇರಬಾರದು.  ಮದ್ಯ ಮಾರಾಟದ ಅವಧಿ ಉಲ್ಲಂಘನೆ ಆಗದಂತೆ ಅಬಕಾರಿ ಇಲಾಖೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಜಿಲ್ಲೆಯಲ್ಲಿ ಅಬಕಾರಿ ಪ್ರಕರಣ ಕಡಿಮೆಯಾಗಿವೆ.  ಇಲಾಖೆ ಜತೆಗೂಡಿ ಇನ್ನಷ್ಟು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.  ಜಿ.ಪಂ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ವೆಂಕಟೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ನಾಗರಾಜ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಲ್. ಶಿವಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ವಿನೋದ್ ಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT