ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಜಯಚಂದ್ರ ಅವಿರೋಧ ಆಯ್ಕೆ

Last Updated 19 ಜುಲೈ 2017, 11:08 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಯೋಜನಾ ಸಮಿತಿಯ ಸದಸ್ಯರಾದ ಜಿ.ಪಂ ಸದಸ್ಯ ಜಿ.ಜೆ.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಯೋಜನಾ ಸಮಿತಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು.

ಜಯಚಂದ್ರ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರು ಅಧ್ಯಕ್ಷರಾಗಿ ಅವಿರೋಧವಾಗಿ  ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಕೆ.ಜಿ. ಶಾಂತರಾಮ್ ಅವರು ಘೋಷಿಸಿದರು. ಸಮಿತಿಗೆ ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸಮಿತಿಯ ಸದಸ್ಯರಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.

ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಚಂದ್ರ, ‘ಜಿಲ್ಲಾ ವ್ಯಾಪ್ತಿಯಲ್ಲಿನ ಗ್ರಾಮೀಣ ಪಂಚಾಯತ್, ಸಂಸ್ಥೆಗಳು, ಪುರಸಭೆ, ಪಟ್ಟಣ ಪಂಚಾಯತಿ, ನಗರಸಭೆಗಳಿಂದ ಸ್ವೀಕೃತವಾಗುವ ಯೋಜನಾ ವರದಿಗಳನ್ನು ದೃಢೀಕರಿಸಿ, ಸ್ಥಳೀಯ ಸಂಪನ್ಮೂಲ ಹಾಗೂ ಅನುದಾನವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಅಭಿವೃದ್ಧಿಗೆ ವಾರ್ಷಿಕ ಮುನ್ನೋಟವನ್ನು ಸಿದ್ಧಪಡಿಸುವುದು ಈ ಸಮಿತಿಯ ಕರ್ತವ್ಯವಾಗಿದೆ’ ಎಂದು ಹೇಳಿದರು.

‘ಗ್ರಾಮಸಭೆ, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾಗಿದೆ. ಸರ್ಕಾರದಿಂದ ಬರುವ ಅನುದಾನವನ್ನು ಬಳಸಿಕೊಂಡು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವುದು ಸಮಿತಿಯ ಉದ್ದೇಶವಾಗಿದೆ. ಈ ಸಮಿತಿಯು ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಚರ್ಚಿಸಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT