ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

210 ವೆಬ್‌ಸೈಟ್‌ಗಳಲ್ಲಿ ಆಧಾರ್‌ ಮಾಹಿತಿ ಬಹಿರಂಗ‌

Last Updated 19 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ 210 ವೆಬ್‌ಸೈಟ್‌ಗಳು ಫಲಾನುಭವಿಗಳ ಆಧಾರ್‌ ಸಂಖ್ಯೆ ಮತ್ತು ಇತರ ವಿವರಗಳನ್ನು ಬಹಿರಂಗಪಡಿಸುತ್ತಿವೆ ಎಂದು ಲೋಕಸಭೆಗೆ ಸರ್ಕಾರ ತಿಳಿಸಿದೆ.

ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ಈ ಬಗ್ಗೆ ಗಮನ ಹರಿಸಿದೆ. ಇಂತಹ ವೆಬ್‌ಸೈಟ್‌ಗಳಿಂದ ಆಧಾರ್‌ ಮಾಹಿತಿ ಬಹಿರಂಗ ಆಗದಂತೆ ಮಾಡಲು  ಪ್ರಯತ್ನಿಸುತ್ತಿದೆ ಎಂದು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಪಿ.ಪಿ. ಚೌಧರಿ ಹೇಳಿದರು.

ಕೆಲವು ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್‌ಗಳಲ್ಲಿಯೂ ಆಧಾರ್‌ ಮಾಹಿತಿ ಬಹಿರಂಗವಾಗುತ್ತಿದೆ. ಫಲಾನುಭವಿಯ ಹೆಸರು, ವಿಳಾಸ, ಆಧಾರ್‌ ಸಂಖ್ಯೆ ಮತ್ತಿತರ ಮಾಹಿತಿ ಜನರಿಗೆ ದೊರೆಯುತ್ತಿದೆ.

ಗುರುತು ಚೀಟಿ ಪ್ರಾಧಿಕಾರದಿಂದ ಆಧಾರ್‌ ಮಾಹಿತಿ ಸೋರಿಕೆ ಆಗಿಲ್ಲ. ಅಲ್ಲದೆ, ಬಯೊಮೆಟ್ರಿಕ್‌ ದತ್ತಾಂಶ ಸೇರಿ ಯಾವ ಮಾಹಿತಿಯನ್ನೂ ಯಾವುದೇ ಖಾಸಗಿ ಸಂಸ್ಥೆ, ಪ್ರಾಧಿಕಾರದಿಂದ ಪಡೆದುಕೊಂಡಿಲ್ಲ ಎಂದೂ ಚೌಧರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT