ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತ್ರಿ ಕಾಮಗಾರಿಗೆ ಚಾಲನೆ

Last Updated 20 ಜುಲೈ 2017, 7:35 IST
ಅಕ್ಷರ ಗಾತ್ರ

ಕನಕಗಿರಿ: ಸಮೀಪದ ಹುಲಿಹೈದರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಯದುಣಸಿ ಗ್ರಾಮದ ಕೆರೆ ಹೂಳು ಎತ್ತುವ ಕಾಮಗಾರಿಗೆ ಮಂಗಳವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚನ್ನಬಸಮ್ಮ ಪಟ್ಟಣಶೆಟ್ಟಿ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು ನಾಯಕ ಮಾತನಾಡಿ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿ ಆರಂಭಿಸಲಾಗಿದೆ’ ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ  ಕನಕಪ್ಪ ನಾಯಕ ಮಾತನಾಡಿ, ‘ಕೂಲಿಕಾರ್ಮಿಕರು ಗುಳೆ ಹೋಗದೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಪ್ರಥಮ ಆದ್ಯತೆಯಾಗಬೇಕು’ ಎಂದು ಹೇಳಿದರು.

ಎಪಿಎಂಸಿ ನಿರ್ದೇಶಕ ಶಿವಶಂಕ್ರಪ್ಪ ಚನ್ನದಾಸರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ನಾಯಕ,  ಸದಸ್ಯರಾದ ಪಾಮಣ್ಣ ನಾಯಕ, ಪರಸಪ್ಪ ಜಾಡಿ, ಪರಶುರಾಮ ನಾಯಕ, ಶಾಮೀದಲಿ ಪ್ರಮುಖರಾದ ಗೋಸ್ಲೆಪ್ಪ ಗದ್ದಿ, ಗರುಡಪ್ಪ ನಾಯಕ, ಬಾಷಾಸಾಬ ಎಲಿಗಾರ,  ಉದ್ಯೋಗ ಖಾತ್ರಿ ತಾಂತ್ರಿಕ ಸಹಾಯಕ ಪಾಷ ತಾವರಗೇರಾ, ಕರವಸೂಲಿಗಾರ ಶ್ರೀನಿವಾಸ ಕುಲಕರ್ಣಿ, ನಾಗೇಶ ನಾಯಕ, ಮಹೇಶ ಪಟ್ಟಣಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT