ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ರಾಜೀನಾಮೆ ಅಂಗೀಕಾರ

Last Updated 20 ಜುಲೈ 2017, 9:25 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭಾ ಸದಸ್ಯತ್ವಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ನೀಡಿದ್ದ ರಾಜೀನಾಮೆಯನ್ನು ಸಭಾಪತಿಗಳು ಗುರುವಾರ ಅಂಗೀಕರಿಸಿದ್ದಾರೆ.

ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತನಾಡಲು ಬಿಜೆಪಿ ಮತ್ತು ಸಭಾಪತಿ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಮಾಯಾವತಿ ಅವರು ರಾಜ್ಯಸಭಾ ಸದಸ್ಯತ್ವಕ್ಕೆ  ಮಂಗಳವಾರ ರಾಜೀನಾಮೆ ನೀಡಿದ್ದರು.

ಉತ್ತರ ಪ್ರದೇಶದಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮಾಯಾವತಿ ಅವರು ರಾಜ್ಯಸಭೆಯಲ್ಲಿ ಮಂಗಳವಾರ ಬೆಳಿಗ್ಗೆ ಮಾತನಾಡಿದರು. ಆದರೆ, ಮಾತನ್ನು ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸೀಮಿತಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿತ್ತು.

‘ನನ್ನ ಸಮುದಾಯದ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ಮಾತನಾಡಲು ಅವಕಾಶ ಇಲ್ಲ ಎಂದಾದರೆ ನಾನು ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿ ರಾಜ್ಯಸಭೆಯಿಂದ ಹೊರನಡೆದಿದ್ದರು.

ಮುಂದಿನ ಏಪ್ರಿಲ್‌ಗೆ ಅವರ ಸದಸ್ಯತ್ವದ ಅವಧಿ ಕೊನೆಗೊಳ್ಳುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT