ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಡಜನರ ಏಳಿಗೆಗೆ ಕಾಂಗ್ರೆಸ್‌ ಬದ್ಧ’

Last Updated 20 ಜುಲೈ 2017, 10:55 IST
ಅಕ್ಷರ ಗಾತ್ರ

ರೋಣ: ‘ಬಡಜನರ ಏಳಿಗೆಗೆ ಅವರ ಅಭಿವೃದ್ಧಿಗಾಗಿ ಶ್ರಮಿಸಿದಂತಹ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್. ರಾಜ್ಯದಲ್ಲಿ ನಾಲ್ಕು ವರ್ಷಗಳಿಂದ ಆಡಳಿತ ನಡೆಸು ತ್ತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜನಪರ ಆಡಳಿತ ನಡೆಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರ ವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ಪಟ್ಟಣದ ಆರ್.ಎಸ್. ಪಾಟೀಲ ಜಿನ್ನಿಂಗ್ ಕಾರ್ಖಾನೆ ಆವರಣದಲ್ಲಿ ಬುಧ ವಾರ ಆಯೋಜಿಸಿದ್ದ ರೋಣ ಮತ ಕ್ಷೇತ್ರದ ಬೂತ್‌ ಮಟ್ಟದ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಕೈಗೊಂಡು ರಾಜ್ಯದ ಬಡ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದ ಬಿ.ಎಸ್‌. ಯಡಿಯೂರಪ್ಪ ಅವರು ವಿನಾಕಾರಣ ಟೀಕಿಸುತ್ತಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡದಿದ್ದರೆ ವಿಧಾನ ಸಭೆಗೆ ಮುತ್ತಿಗೆ ಹಾಕುವುದಾಗಿ ಯಡಿಯೂರಪ್ಪ ಹೇಳಿದ್ದರು. ಆದರೆ, ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ತನ್ನ ಮಾತನ್ನು ಉಳಿಸಿಕೊಂಡಿದೆ. ಆದರೆ, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಿಲ್ಲ. ಆದ್ದರಿಂದ, ಯಡಿಯೂರಪ್ಪ ಲೋಕಸಭೆಗೆ ಮುತ್ತಿಗೆ ಹಾಕಲಿ’ ಎಂದು ವ್ಯಂಗ್ಯವಾಡಿದರು.

ಎಐಸಿಸಿ ಕಾರ್ಯದರ್ಶಿ ಮಾಣಿಕಂ ಠಾಕೂರ್‌ ಮಾತನಾಡಿ, ‘ಮೋದಿ ನೇತೃ ತ್ವದ ಕೇಂದ್ರ ಸರ್ಕಾರವು ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿತು. ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ವಿಫಲವಾಗಿದೆ. ನೋಟ್ ಬ್ಯಾನ್ ಮಾಡಿ, ದೇಶದ ಬಡ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಅದೇ ರೀತಿಯಾಗಿ ಜಿ.ಎಸ್.ಟಿ ಸೇರಿದಂತೆ ಹತ್ತು ಹಲವು ಬಡ ಜನರ ವಿರೋಧಿ ನಿಯಮಗಳನ್ನು ಜಾರಿಗೊಳಿಸಿ ಬಡವರನ್ನು ಸಂಕಷ್ಟದಲ್ಲಿ ಸಿಲುಕುವಂತೆ ಮಾಡಿದೆ’ ಎಂದು ಆರೋಪಿಸಿದರು.

ಶಾಸಕ ಜಿ.ಎಸ್.ಪಾಟೀಲ ಮಾತ ನಾಡಿದರು. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಅಧ್ಯಕ್ಷತೆ ವಹಿಸಿದ್ದರು, ಶಾಸಕರಾದ ಜಿ.ಎಸ್. ಪಾಟೀಲ, ಬಿ.ಆರ್.ಯಾವ ಗಲ್, ರಾಮಕೃಷ್ಣ ದೊಡ್ಡಮನಿ, ಜಿ.ಪಂ. ಅಧ್ಯಕ್ಷ ವಾಸಣ್ಣಾ ಕುರಡಗಿ, ಉಪಾಧ್ಯಕ್ಷೆ ರೂಪಾ ಅಂಗಡಿ, ಸದಸ್ಯೆ ಮಂಜುಳಾ ಹುಲ್ಲಣ್ಣ ವರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಐ.ಎಸ್.ಪಾಟೀಲ, ಹೊಳೆಆಲೂರು ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ದಶರಥ ಗಾಣಿಗೇರ, ವೀರಣ್ಣ ಶೆಟ್ಟರ, ಪರಶು ರಾಮ ಅಳಗವಾಡಿ ಯೂಸುಫ್ ಇಟಗಿ ಹಾಜರಿದ್ದರು. ತೆಂಗು ಮತ್ತು ನಾರು ಅಭಿ ವೃದ್ಧಿ ನಿಗಮದ ನಿರ್ದೇಶಕ ವೀರಯ್ಯಾ ಸೋಮನಕಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT