ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರಕ್ಕಿದೆ ಪ್ರತ್ಯೇಕ ಕಾನೂನು

Last Updated 20 ಜುಲೈ 2017, 19:30 IST
ಅಕ್ಷರ ಗಾತ್ರ

ಸಂವಿಧಾನದ  370ನೇ ವಿಧಿಯು ಜಮ್ಮು-ಕಾಶ್ಮೀರ ರಾಜ್ಯದ ಕುರಿತು ವಿವರಿಸುತ್ತದೆ. ಕಾಶ್ಮೀರದಲ್ಲಿ ಪ್ರತ್ಯೇಕ ಸಂವಿಧಾನವು ಅಸ್ತಿತ್ವದಲ್ಲಿದೆ. 1956ರ ನವೆಂಬರ್‌ 17ರಂದು ರಾಜ್ಯದ ವಿಧಾನಸಭೆಯು ಸರ್ವಾನುಮತದಿಂದ ಇದನ್ನು ಅಂಗೀಕರಿಸಿದೆ. ಈ ಸಂವಿಧಾನದ 1ರಿಂದ8 ಮತ್ತು 158ನೇ ವಿಧಿಗಳು ಅಂದೇ ಜಾರಿಗೆ ಬಂದಿವೆ. ಉಳಿದೆಲ್ಲಾ ವಿಧಿಗಳು ಜಾರಿಗೆ ಬಂದದ್ದು 1957ರ ಜನವರಿ 26ರಂದು.

ಇದರಿಂದಾಗಿಯೇ ಜಮ್ಮು-ಕಾಶ್ಮೀರದ ಸಂವಿಧಾನವು ದೇಶದಲ್ಲಿ ಜಾರಿಯಲ್ಲಿರುವ ಎರಡನೇ ಸಂವಿಧಾನ ಎಂದೂ ಕೆಲವರು ಹೇಳುತ್ತಾರೆ. ಕಾಶ್ಮೀರದ ಸಂವಿಧಾನವು ತಿದ್ದುಪಡಿಗೊಳ್ಳುವುದು ಇಲ್ಲಿಯ ವಿಧಾನ ಸಭೆಯಲ್ಲಿ. ಈ ರಾಜ್ಯದಲ್ಲಿ ಆಸ್ತಿ ಹೊಂದಿರುವವರು ಪ್ರತ್ಯೇಕ ಕಾನೂನು ಪಾಲಿಸಬೇಕು ಹಾಗೂ ಪ್ರತ್ಯೇಕ ನಾಗರಿಕತೆ ಹೊಂದಿರಬೇಕು ಎನ್ನುತ್ತದೆ ಈ ವಿಧಿ.  ಇಲ್ಲಿಯ ಜನರ ಮೂಲಭೂತ ಹಕ್ಕುಗಳು ಕೂಡ ಇತರ ರಾಜ್ಯಗಳಿಗಿಂತ ಭಿನ್ನ. 

ರಕ್ಷಣೆ, ವಿದೇಶಾಂಗ ವ್ಯವಹಾರ, ಹಣಕಾಸು ಹಾಗೂ ಸಂವಹನಗಳ ಕುರಿತಂತೆ ಇರುವ ಕಾಯ್ದೆಗಳ ಹೊರತಾಗಿ ಇತರ ಯಾವುದೇ ಕಾಯ್ದೆಗಳನ್ನು ಜಮ್ಮು-ಕಾಶ್ಮೀರದಲ್ಲಿ ಜಾರಿಗೆ ತರಬೇಕಾದರೆ  ಆ ರಾಜ್ಯದ ಅನುಮತಿ ಅಗತ್ಯ.   ಆ ರಾಜ್ಯಕ್ಕೆ ಸಂಬಂಧಿಸಿದಂತೆ ಕಾನೂನನ್ನು ರೂಪಿಸುವ ಅಧಿಕಾರ ಸಂಸತ್ತಿಗೆ ಕೂಡ ಇರುವುದಿಲ್ಲ. ಒಂದು ವೇಳೆ ಕಾನೂನು ರೂಪಿಸಲೇಬೇಕಿದ್ದಲ್ಲಿ, ಅದನ್ನು ರಾಷ್ಟ್ರಪತಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮುಟ್ಟಿಸಿ ಅಲ್ಲಿಯ ವಿಧಾನ ಸಭೆಯಲ್ಲಿ ಮಂಡಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT