ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರಿಯ ಸಹಾಯಕ ವೃಂದದ ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಪ್ರಕಟ

Last Updated 20 ಜುಲೈ 2017, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಚಿವಾಲಯದ ಕಿರಿಯ ಸಹಾಯಕ ವೃಂದದ ನೌಕರರ ಪರಿಷ್ಕೃತ ಸೇವಾ ಜ್ಯೇಷ್ಠತಾ ಪಟ್ಟಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಕಟಿಸಿದೆ.

ಬಡ್ತಿ ಮೀಸಲಾತಿ ಕಾಯ್ದೆಯನ್ನು ರದ್ದುಪಡಿಸಿದ್ದ ಸುಪ್ರೀಂ ಕೋರ್ಟ್‌,   ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಪ್ರಕಟಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು.
1956ರ ನವೆಂಬರ್ 20ರಿಂದ 2015ರ ಡಿಸೆಂಬರ್‌ 31ರ ಅವಧಿಯ ನೌಕರರ ವಿವರವನ್ನು ಪರಿಷ್ಕರಿಸಿ ಅಂತಿಮ ಪಟ್ಟಿ ಪ್ರಕಟಿಸಿದೆ.  2016 ಜ. 1ರಿಂದ ಡಿಸೆಂಬರ್‌ 31ರವರೆಗಿನ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗೆ ಅವಕಾಶ ಕಲ್ಪಿಸಲಾಗಿದೆ.

119 ಪುಟಗಳ ಪಟ್ಟಿಯಲ್ಲಿ 2,184 ನೌಕರರ ಹೆಸರಿದೆ. ಈ ಪೈಕಿ ಶೇ 40ರಷ್ಟು ನೌಕರರು ನಿವೃತ್ತರಾಗಿದ್ದಾರೆ. ನೇರ ನೇಮಕಾತಿಯಡಿ ನೇಮಕವಾದ ಸಿಬ್ಬಂದಿಗೆ ತೀರ್ಪು ಅನ್ವಯವಾಗದೇ ಇರುವುದರಿಂದ ಅವರನ್ನು ಪರಿಗಣಿಸಿಲ್ಲ ಎಂದು ಆದೇಶ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT