ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಜೀರಿಯಾ ಪ್ರಜೆ ಸೆರೆ

Last Updated 20 ಜುಲೈ 2017, 19:48 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್.ಪುರದಲ್ಲಿ ಗುರುವಾರ ಮಾದಕ ವಸ್ತು ಮಾರುತ್ತಿದ್ದ ಆರೋಪದಡಿ ನೈಜೀರಿಯಾದ ಅಮ್‌ಸೆಲಂ ಚಿಗಾಜೆ ಉಡೆವೊ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆತನಿಂದ ₹ 25 ಸಾವಿರ ಮೌಲ್ಯದ ಮಾದಕ ವಸ್ತು­, ಪಾಸ್‌ಪೋರ್ಟ್‌ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಅಧಿಕಾರಿ ತಿಳಿಸಿದರು.

‘ವಾಣಿಜ್ಯ ಉದ್ದೇಶದಡಿ ವೀಸಾ ಪಡೆದು ನಗರಕ್ಕೆ ಬಂದಿದ್ದ ಆರೋಪಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಕಲಿ ಗುರುತಿನ ಚೀಟಿ ಸೃಷ್ಟಿಸಿಕೊಂಡು ವಿದ್ಯಾರ್ಥಿ ಸೋಗಿನಲ್ಲಿ ಈ ಕೃತ್ಯ ಎಸಗುತ್ತಿದ್ದ.  ಪರಿಚಯಸ್ಥರಿಂದ ಮಾದಕವಸ್ತು ಖರೀದಿಸುತ್ತಿದ್ದ ಆರೋಪಿ, ಅದನ್ನು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪೆನಿ ಉದ್ಯೋಗಿಗಳಿಗೆ ಮಾರುತ್ತಿದ್ದ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT