ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಸರ್ವ ಕಾಲಕ್ಕೂ ಶ್ರೇಷ್ಠ ಗ್ರಂಥ

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕೆ. ಶೀಲಾ ಶೆಟ್ಟಿ ಅಭಿಮತ
Last Updated 21 ಜುಲೈ 2017, 6:07 IST
ಅಕ್ಷರ ಗಾತ್ರ

ಉಡುಪಿ: ಸರ್ವ ಕಾಲಕ್ಕೂ ಭಾರತದ  ಅತ್ಯಂತ ಶ್ರೇಷ್ಠ ಗ್ರಂಥ ನಮ್ಮ ಸಂವಿಧಾನ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕೆ.ಶೀಲಾ ಶೆಟ್ಟಿ ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆ ಇವರ ಸಂಯುಕ್ತ ಆಶ್ರಯದಲ್ಲಿ  ಗುರುವಾರ  ಆಶ್ರಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ‘126 ತಮಗಿದೋ ನಮ್ಮ ಗೌರವ ನಮನ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.

ಎಲ್ಲ ಕಾಲದಲ್ಲೂ ಪ್ರತಿಯೊಬ್ಬರು ನೆನಪಿಸಿಕೊಳ್ಳುವಂತಹ ವ್ಯಕ್ತಿತ್ವ ಹೊಂದಿದ್ದವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರದು. ಇಂದು ಅವರು ರಚಿಸಿದ ಸಂವಿಧಾನವನ್ನು ಪಂಚಮ ವೇದಗಳಲ್ಲಿ ಒಂದು ಪರಿಗಣಿಸಲಾಗುತ್ತಿದೆ.

ಕೆಲವೊಂದು ಗ್ರಂಥಗಳು ಸಮಯ ಕಳೆದಂತೆ ಅದರಲ್ಲಿ ಇರುವ ಮೌಲ್ಯಗಳನ್ನು ಕಳೆದುಕೊಳ್ಳುತ್ತದೆ, ಆದರೆ ಸಂವಿಧಾನಕ್ಕೆ ಅಂದು ಎಷ್ಟು ಪ್ರಾಮುಖ್ಯತೆ ನೀಡುತ್ತಿದ್ದೇವೋ ಇಂದು ಕೂಡ  ಅಷ್ಟೇ ಗೌರವವನ್ನು ತೋರಿಸಿವುದರ ಮೂಲಕ ಮುಂದಿನ ಪೀಳಿಗೆಗೂ ಇದನ್ನು ನೆನಪಿಸುವ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರೆ.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್,ಪೊಲೀಸ್ ವರಿಷ್ಠಾಧಿಕಾರಿ ಕೆ,ಟಿಬಾಲಕೃಷ್ಣ, ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT