ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಚಿವ ಧನಂಜಯ ಕುಮಾರ್‌ ಕಾಂಗ್ರೆಸ್ ಸೇರ್ಪಡೆ

Last Updated 21 ಜುಲೈ 2017, 20:34 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ್‌ ಕಾಂಗ್ರೆಸ್‌ ಸೇರಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಸೇರಿದರು. 

ಬಿಜೆಪಿಯಿಂದ 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ ಆದರು. ಬಳಿಕ 1991ರಿಂದ ನಾಲ್ಕು ಬಾರಿ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಮೂರು ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಬಿಜೆಪಿಯಲ್ಲಿ ಮೂಲೆಗುಂಪಾದ ಬಳಿಕ ಅವರು ಜೆಡಿಎಸ್‌ ಸೇರ್ಪಡೆಗೊಂಡಿದ್ದರು. ಬಳಿಕ ಆ ಪಕ್ಷವನ್ನೂ ತ್ಯಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT