ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ಗ್ರಾಮಗಳಲ್ಲಿ ಭೂ ಪರಿವರ್ತನೆಗೆ ಅವಕಾಶ

Last Updated 22 ಜುಲೈ 2017, 9:47 IST
ಅಕ್ಷರ ಗಾತ್ರ

ಚಾಮರಾಜನಗರ: ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಮತ್ತು 27 ಪೂರ್ಣ ಕಂದಾಯ ಗ್ರಾಮಗಳಲ್ಲಿ ಜಮೀನುಗಳ ಭೂ ಪರಿವರ್ತನೆಗೆ ಮಹಾಯೋಜನೆ ಪರಿಷ್ಕೃತ -2ರಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುಹೇಲ್ ಆಲಿ ಖಾನ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಬೆಳವಣಿಗೆ ಮತ್ತು ಕೈಗಾರಿಕೆ, ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಹಾಗೂ ವಸತಿ ಪ್ರದೇಶಗಳನ್ನು ಅಭಿವೃದ್ಧಿ ಮಾಡಲು ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮತ್ತು 27 ಪೂರ್ಣ ಕಂದಾಯ ಗ್ರಾಮಗಳನ್ನು ಒಳಗೊಂಡ ಮಹಾ ಯೋಜನೆಯನ್ನು ತಯಾರಿಸಲಾಗಿದೆ. ಈ ವ್ಯಾಪ್ತಿಯಲ್ಲಿ ರುವ ಕಂದಾಯ ಭೂಮಿಯನ್ನು ಪರಿವರ್ತನೆ ಮಾಡುವ ಹಕ್ಕು ಪ್ರಾಧಿಕಾರಕ್ಕೆ ಇದೆ. ಹೀಗಾಗಿ ಕೃಷಿ ಜಮೀನನ್ನು ಇತರೆ ಉದ್ದೇಶಗಳಿಗೆ ಬಳಕೆ ಮಾಡಲು ಅನುಕೂಲವಾಗುವಂತೆ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಭೂ ಪರಿವರ್ತನೆ ಮಾಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು.

ವಿವಿಧ ಜಮೀನುಗಳನ್ನು ಪರಿವರ್ತನೆ ಮಾಡಲು ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಯಿತು. ಪ್ರಾಧಿಕಾರದ ಸದಸ್ಯರಾದ ಆಶಾ, ಶ್ರೀಕಾಂತ್, ಆಯುಕ್ತ ನಿಸಾರ್ ಆಹಮದ್, ನಗರ ಯೋಜನೆ ಇಲಾಖೆ ಸಹಾಯಕ ನಿರ್ದೇಶಕ ಸುಮ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT