ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಪೊಲೀಸ್ ಠಾಣೆಗೆ ನುಗ್ಗಿ ಯೋಧರಿಂದ ಪೊಲೀಸರ ಮೇಲೆ ಹಲ್ಲೆ; ಆರೋಪ

Last Updated 22 ಜುಲೈ 2017, 9:53 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಕಾಶ್ಮೀರದ ಗಂದೇರ್‍ಬಲ್ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಯೋಧರು ಪೊಲೀಸ್ ಠಾಣೆಗೆ ನುಗ್ಗಿ ಎಂಟು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಪೊಲೀಸ್ ಮತ್ತು ಯೋಧರ ನಡುವಿನ ಜಗಳದಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್  ಸೇರಿದಂತೆ ಎಂಟು ಪೊಲೀಸರಿಗೆ ಗಾಯಗಳಾಗಿವೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯೋಧರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಬಲ್ಲಮೂಲಗಳು ಹೇಳಿವೆ.

ಹಲ್ಲೆಗೊಳಗಾಗಿರುವ ಪೊಲೀಸರ ಫೋಟೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆದಂ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT