ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಪ್ರಾರ್ಥನೆಗೆ ಮೊರೆ ಹೋದ ರೈ

Last Updated 22 ಜುಲೈ 2017, 10:08 IST
ಅಕ್ಷರ ಗಾತ್ರ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಉದಯ ಲಾಂಡ್ರಿಯಲ್ಲಿ ಜುಲೈ  4ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಕುಮಾರ್ ಹತ್ಯೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗಿ, ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಸ್ಥಾಪನೆಯಾಗಬೇಕು ಎಂದು ಪೊಳಲಿ ರಾಜರಾಜೇಶ್ವರಿ ದೇವ ಸ್ಥಾನ ಸೇರಿದಂತೆ  ಇಲ್ಲಿನ ಉದ್ದಬೆಟ್ಟು ಜುಮ್ಮಾ ಮಸೀದಿ ಮತ್ತು ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಸಾಮೂಹಿಕ ಪ್ರಾರ್ಥನೆ ನಡೆಸಿ ಗಮನ ಸೆಳೆದರು.

ಪೊಳಲಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಶರತ್ ಹತ್ಯೆಗೆ ಸಂಬಂಧಿಸಿದಂತೆ ನೈಜ ಆರೋಪಿಗಳು ಪತ್ತೆಯಾಗಿ ಆವರಿಗೆ ಕುಮ್ಮಕ್ಕು ನೀಡಿದ ವ್ಯಕ್ತಿಗಳಿಗೂ ದೇವಿಯೇ  ಶಿಕ್ಷೆ ನೀಡಬೇಕು. ಆ ಮೂಲಕ ಜಿಲ್ಲೆಯಲ್ಲಿ ಶಾಶ್ವತ ವಾಗಿ ಶಾಂತಿ ಮತ್ತು ಸಾಮರಸ್ಯ ಮರು ಸ್ಥಾಪನೆಯಾಗಬೇಕು. ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಇಂತಹ ಹೇಯ ಕೃತ್ಯಗಳಿಗೆ ನಾನು ಕುಮ್ಮಕ್ಕು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

‘ನನ್ನ ಮೇಲೆ ರಾಜಕೀಯ ವಿರೋಧಿ ಗಳು ಅನವಶ್ಯಕ ಅಪಪ್ರಚಾರ ನಡೆಸುತ್ತಿದ್ದಾರೆ. ಕೋಮು ಸಂಘರ್ಷಕ್ಕೆ ಕುಮ್ಮಕ್ಕು ನೀಡಿ ಇಂತಹ ಅಪಪ್ರಚಾರ ಮಾಡುವವರಿಗೂ ತಕ್ಕ ಶಿಕ್ಷೆಯಾಗಲಿ ಎಂದು ಸಾಮೂಹಿಕ ಪ್ರಾರ್ಥನೆಯಲ್ಲಿ ದೇವರಲ್ಲಿ ಬೇಡಿಕೊಂಡಿರುವುದಾಗಿ’ ತಿಳಿಸಿದರು. ಇದೇ ವೇಳೆ ಇಲ್ಲಿನ ಉದ್ದಬೆಟ್ಟು ಜುಲ್ಲಾ ಮಸೀದಿಗೆ ತೆರಳಿ ಅಲ್ಲಿಯೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇದೇ ದಾರಿಯಲ್ಲಿ ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್‌ನಲ್ಲಿ ಸಾಮೂ ಹಿಕ ಪ್ರಾರ್ಥನೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಮಂಜುಳಾ ಮಾಧವ ಮಾವೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೆ.ಸಂಜೀವ್‌ ಪೂಜಾರಿ, ಪ್ರಭಾಕರ ಪ್ರಭು, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ಕಾಂಗ್ರೆಸ್ ವಲಯಾಧ್ಯಕ್ಷ ಚಂದ್ರಶೇಖರ ಭಂಡಾರಿ, ಪಿ.ಜಿನರಾಜ ಅರಿಗ, ಎ.ಸಿ. ಭಂಡಾರಿ, ಧರಣೇಂದ್ರ ಕುಮಾರ್, ಉಮೇಶ ಬೋಳಂತೂರು, ಮಧು ಸೂಧನ ಶೆಣೈ ಮತ್ತಿತರರು ಇದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ಯೂ ಸುಫ್ ಕರಂದಾಡಿ, ಚಚರ್್ನ ಧರ್ಮಗುರು ಮ್ಯಾಕ್ಷಿಂ ನೊರೊನ್ನಾ, ಸಿಸ್ಟರ್ ಸುಪ್ರಿ ಯಾ, ತೊಡಂಬಿಲ ಚರ್ಚ್‌ನ ಧರ್ಮ ಗುರು ಕಿರಣ್ ಪಿಂಟೋ, ಬಂಟ್ವಾಳ ಕೆಥೊಲಿಕ್ ಸಭಾ ಅಧ್ಯಕ್ಷ ಸ್ಟ್ಯಾನಿ ಲೋಬೊ ಸಹಿತ  ಕಾಂಗ್ರೆಸ್ ಮುಖಂ ಡರು ಮತ್ತು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT