ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌, ಮಹಾರಾಷ್ಟ್ರ: ಭಾರಿ ಮಳೆಗೆ ಐದು ಮಂದಿ ಸಾವು

Last Updated 22 ಜುಲೈ 2017, 19:02 IST
ಅಕ್ಷರ ಗಾತ್ರ

ಅಹಮದಾಬಾದ್, ಮುಂಬೈ: ಮಹಾರಾಷ್ಟ್ರ, ಗುಜರಾತ್‌ನಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ಐವರು ಮೃತಪಟ್ಟಿದ್ದಾರೆ.

ಗುಜರಾತಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಹ ಭೀತಿ ಎದುರಾಗಿದೆ. ಧಾರಾಕಾರ ಮಳೆಯಲ್ಲಿ ಸಿಲುಕಿ ಮೂರು ಮಂದಿ ಮೃತಪಟ್ಟಿದ್ದಾರೆ. 6 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ವಾಯುಪಡೆ ನೆರೆಯ ಪ್ರದೇಶಕ್ಕೆ ದೌಡಾಯಿಸಿದ್ದು, ಪ್ರವಾಹದಲ್ಲಿ ಸಿಲುಕಿರುವ 200ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ಕಳೆದ 24 ಗಂಟೆಗಳಿಂದ ಸೌರಾಷ್ಟ್ರದಲ್ಲಿ ಮಳೆ ಅಬ್ಬರಿಸಿದೆ. ಇಲ್ಲಿನ ಎಲ್ಲಾ ನದಿಗಳು ತುಂಬಿ ಹರಿಯುತ್ತಿದ್ದು, ಈ ಋತುವಿನ ಶೇ 52ರಷ್ಟು ಮಳೆಯಾಗಿದೆ ಎಂದು ಗುಜರಾತಿನ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಹೇಳಿದ್ದಾರೆ.

ಮಳೆಗೆ ಸಿಲುಕಿ ಮೃತಪಟ್ಟವರು ರಾಜ್‌ಕೋಟ್ ಹಾಗೂ ಅಮರೇಲಿ ನಿವಾಸಿಗಳು ಎಂದು ತಿಳಿದು ಬಂದಿದೆ. ಅಲ್ಲದೇ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT