ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಹೇರಿಕೆ ನಿಲ್ಲಲಿ, ತ್ರಿಭಾಷಾ ನೀತಿ ಬೇಡ: ಕನ್ನಡಪರ ಚಿಂತಕರು

Last Updated 23 ಜುಲೈ 2017, 9:14 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಮೆಟ್ರೊದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕನ್ನಡಪರ ಚಿಂತಕರು ಭಾನುವಾರ ಸುದ್ದಿಗೋಷ್ಠಿ ನಡೆಸಿದರು.

ಮೆಟ್ರೊಗೆ ತ್ರಿಭಾಷಾ ನೀತಿ ಬೇಡ, ದ್ವಿಭಾಷಾ ನೀತಿ ಸಾಕು. ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಪ್ರೊ.ಪಿ.ವಿ.ನಾರಾಯಣ್‌ ಹೇಳಿದರು.

ಮೆಟ್ರೊ ನಿಲ್ದಾಣದಲ್ಲಿನ ಹಿಂದಿ ಫಲಕಗಳಿಗೆ ಮಸಿ ಬಳಿದಿದ್ದ ಕರವೇ ಕಾರ್ಯಕರ್ತರನ್ನು ಬಂಧಿಸಿರುವುದು ಖೇದಕರ. ಈ ವಿಚಾರದಲ್ಲಿ ಪೊಲೀಸರ ಕ್ರಮ ಖಂಡನೀಯ ಎಂದು ಪ್ರೊ.ಚಂದ್ರಶೇಖರ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ಪೊಲೀಸರು ಕರವೇ ಕಾರ್ಯಕರ್ತರಿಗೆ ಕೋಮುವಾದದ ಹಣೆಪಟ್ಟಿ ಕಟ್ಟಿದ್ದಾರೆ. ಈ ರೀತಿಯಲ್ಲಿ ಬೆದರಿಕೆ ಹಾಕುವುದು ಸರಿಯಲ್ಲ. ರಾಜ್ಯ ಸರ್ಕಾರ ಎಚ್ಚೆತ್ತು ಕೊಳ್ಳಬೇಕಿದೆ ಎಂದ ರಂಗಕರ್ಮಿ ಪ್ರಕಾಶ್‌ ಬೆಳವಾಡಿ ಮುಂದಿನ ಹೋರಾಟದ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT