ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಹಕ್ಕು ರಕ್ಷಣೆಗೆ ಕಾರ್ಯ ಪಡೆ

ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ
Last Updated 24 ಜುಲೈ 2017, 7:18 IST
ಅಕ್ಷರ ಗಾತ್ರ

ಉಡುಪಿ: ‘ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತ್ಯೇಕ ಕಾರ್ಯ ಪಡೆಯನ್ನು ರಚಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಶನಿವಾರ ಇಲ್ಲಿ ತಿಳಿಸಿದರು.

‘ಜಿಲ್ಲಾಧಿಕಾರಿ ಕಚೇರಿಯಲ್ಲಿ  ನಡೆದ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ  ಮೊದಲ ಹಂತವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಪಡೆ ರಚಿಸಲಾಗುವುದು, ಶೇ 60 ಮಕ್ಕಳು ಸದಸ್ಯರಾಗಲಿದ್ದು, ಉಳಿದ ಶೇ 40ರಲ್ಲಿ ಜನಪ್ರತಿನಿಧಿಗಳು, ಮಕ್ಕಳ ಮಿತ್ರರು ಹಾಗೂ ಮಕ್ಕಳ ಹಕ್ಕುಗಳಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇರಲಿದ್ದಾರೆ’ ಎಂದು ಹೇಳಿದರು.

‘ಗ್ರಾಮ ಪಂಚಾಯಿತಿಯಲ್ಲಿ  ಕಾರ್ಯಪಡೆ ರಚಿಸುವ ಕುರಿತು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ಸೂಚನೆ ನೀಡಲಾಗುವುದು ಹಾಗೂ  ಕಾರ್ಯಪಡೆಗೆ ಮಕ್ಕಳನ್ನು ನೇಮಿಸುವ ಕುರಿತು ಆಯ್ಕೆ ನಡೆಸಲಾಗುವುದು , ತಾಲ್ಲೂಕು  ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಈ ಕಾರ್ಯಪಡೆಯನ್ನು ರಚಿಸಲಾಗುವುದು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಚಂದ್ರ ಅರಸ್ ಇದ್ದರು.

*
ಮಕ್ಕಳ ಕಾರ್ಯಪಡೆಗೆ ಲೋಗೊ ಸಿದ್ದಪಡಿಸುವ ಕುರಿತಂತೆ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ,  ಉತ್ತಮ ಚಿತ್ರವನ್ನು ಆಯ್ಕೆ ಮಾಡಿ.
–ಶಿಲ್ಪಾ ನಾಗ್,
ಉಪ ವಿಭಾಗಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT