ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 26 ಮಂದಿ ಸಾವು

Last Updated 24 ಜುಲೈ 2017, 14:25 IST
ಅಕ್ಷರ ಗಾತ್ರ

ಲಾಹೋರ್: ಪೂರ್ವ ಪಾಕಿಸ್ತಾನದ ಲಾಹೋರ್ ನಗರದಲ್ಲಿ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್ ಶರೀಫ್ ನಿವಾಸದ ಬಳಿ ಸೋಮವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಬಾಂಬ್ ದಾಳಿಯಲ್ಲಿ 26 ಮಂದಿ ಸಾವಿಗೀಡಾಗಿದ್ದು, 56 ಮಂದಿಗೆ ಗಾಯಗಳಾಗಿವೆ.

ಪೊಲೀಸರನ್ನು ಗುರಿಯಾಗಿರಿಸಿ ಈ ಬಾಂಬ್ ದಾಳಿ ನಡೆದಿದೆ. ಇದೊಂದು ಆತ್ಮಾಹುತಿ ದಾಳಿ ಎಂದು ಲಾಹೋರ್ ಪೊಲೀಸ್ ಮುಖ್ಯಸ್ಥ ಅಮೀನ್ ವಾಯಿನ್ಸ್ ಹೇಳಿದ್ದಾರೆ.

ರಕ್ಷಣಾ ಕಾರ್ಯಪಡೆ 1122ರ ಪ್ರಕಾರ ಪೊಲೀಸರು ಸೇರಿದಂತೆ 26 ಮಂದಿ ಈ ದಾಳಿಯಲ್ಲಿ ಹತರಾಗಿದ್ದಾರೆ.

ಇಲ್ಲಿನ ಅರ್ಫಾ ಕರೀಂ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ ಬಳಿಯಲ್ಲಿರುವ ಜನನಿಬಿಡ ಮಾರುಕಟ್ಟೆಯ ಬಳಿ ಪ್ರಬಲ ಬಾಂಬ್ ದಾಳಿ ನಡೆದಿದೆ. ಪಾಕ್ ಪ್ರಧಾನಿ ನವಾಜ್ ಶರೀಫ್ ಅವರ ಸಹೋದರ ಶಹಬಾತ್ ಶರೀಫ್ ಅವರ ಮನೆ ಘಟನಾ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲಿದೆ.

ಇಲ್ಲಿಯವರೆಗೆ ಯಾವುದೇ ಸಂಘಟನೆಗಳು ದಾಳಿಯ ಹೊಣೆ ಹೊತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT