ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗೆ ನಿರ್ದಿಷ್ಟ ಗುರಿ ಇರಲಿ: ರಮೇಶ್

ಶೈಕ್ಷಣಿಕ ಸಮಾಲೋಚನಾ ಸಭೆ ಹಾಗೂ ಪ್ರತಿಭಾ ಪುರಸ್ಕಾರ
Last Updated 25 ಜುಲೈ 2017, 10:05 IST
ಅಕ್ಷರ ಗಾತ್ರ

ವಿಜಯಪುರ: ವಿದ್ಯಾರ್ಥಿಗಳ ನಿರ್ದಿಷ್ಟ ಗುರಿಯೊಂದಿಗೆ ನಿರಂತರ ಅಭ್ಯಾಸದಲ್ಲಿ ತೊಡಗುವುದರಿಂದ ಸ್ಪರ್ಧಾತ್ಮಕ ದಿನಗಳಲ್ಲೂ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಗತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎನ್.ರಮೇಶ್ ಹೇಳಿದರು.

ಇಲ್ಲಿನ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶೈಕ್ಷಣಿಕ  ಶೈಕ್ಷಣಿಕ ಸಮಾಲೋಚನಾ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ತರಬೇತಿ, ಉತ್ತಮ ಮಾರ್ಗದರ್ಶನ, ನೀಡುವ ಸಲುವಾಗಿ ಮೌಲ್ಯಾಧಾರಿತವಾದ ಶಿಕ್ಷಣ ನೀಡಬೇಕು. ಕಲಿಕೆಗೆ ಪೂರಕವಾಗಿರುವ ವಾತಾವರಣ ನಿರ್ಮಾಣ ಮಾಡಿಕೊಡಬೇಕು. ಜತೆಗೆ ಪೋಷಕರು ಅವರ ಭವಿಷ್ಯದ ಕುರಿತು ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಯುವಜನರು ಉತ್ತಮ ವಿಚಾರಗಳನ್ನು ಕಲಿಯುವ ವಯಸ್ಸಿನಲ್ಲಿ ಹಾದಿ ತಪ್ಪುತ್ತಿದ್ದಾರೆ. ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದರು.

ಪ್ರಗತಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜೆ.ಎನ್.ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳ ಜೀವನ ಅತ್ಯಮೂಲ್ಯವಾದುದು. ಈ ಅವಧಿಯನ್ನು ಸದ್ಬಳಕೆ ಮಾಡಿಕೊಂಡವರು ಭವಿಷ್ಯದಲ್ಲಿ ಉತ್ತಮ ನೆಲೆ ಕಂಡುಕೊಳ್ಳಲಿದ್ದಾರೆ. ಶಾಲೆಗಳಲ್ಲಿ ಕಲಿಯುವಂತಹ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವ ಮನೋಭಾವ ಇರಬೇಕು ಎಂದರು. ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಬೇಕು ಎಂದರು.

ಪ್ರಗತಿ ಪ್ರೌಢಶಾಲೆ ಮುಖ್ಯಶಿಕ್ಷರಾದ ವಿ.ಬಸವರಾಜು ಮಾತನಾಡಿ, ಹತ್ತನೇ ತರಗತಿಯ ಪರೀಕ್ಷಾ ಫಲಿತಾಂಶ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ್ದಾಗಿದೆ. ಆದ್ದರಿಂದ ಶಿಕ್ಷಕರೊಂದಿಗೆ ಪೋಷಕರು ಉತ್ತಮ ಒಡನಾಟವಿಟ್ಟುಕೊಂಡು ಶಾಲೆಯಲ್ಲಿ ಹಾಕಿಕೊಂಡಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಹಕಾರ ನೀಡಬೇಕು ಎಂದರು.

2016–17 ನೇ  ಶೈಕ್ಷಣಿಕ ವರ್ಷದಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.   ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ   ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT