ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾನೂನು ಸುವ್ಯವಸ್ಥೆಗೆ ನಗರಸಭೆ ಸಹಕಾರ ಅಗತ್ಯ’

Last Updated 26 ಜುಲೈ 2017, 4:39 IST
ಅಕ್ಷರ ಗಾತ್ರ

ಹರಿಹರ: ನಗರದ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಹಾಗೂ ಸುರಕ್ಷತೆಗೆ ನಗರಸಭೆ ಸಹಕಾರ ಅಗತ್ಯ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಎಸ್. ಗುಳೇದ ಅಭಿಪ್ರಾಯಪಟ್ಟರು.

ನಗರದ ಭಾಗೀರಥಿ ಕಲ್ಯಾಣ ಮಂಟಪದಲ್ಲಿ ಹರಿಹರ ವೃತ್ತ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ನಡೆದ ಸುಧಾರಿತ ಗಸ್ತು ವ್ಯವಸ್ಥೆಯ ನಾಗರಿಕ ಸಮಿತಿ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ಷಣಾ ವ್ಯವಸ್ಥೆ ಹಾಗೂ ಸಂಚಾರ  ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಕ್ಕಾಗಿ ಸಿಸಿಟಿವಿ ಕ್ಯಾಮೆರಾಗಳು ಅಗತ್ಯ ಎಂದರು.

ಸುರಕ್ಷತೆಗಾಗಿ ದ್ವಿ ಚಕ್ರ ಗಸ್ತು ವ್ಯವಸ್ಥೆ ಹಾಗೂ ಸಂಚಾರ ನಿಯಂತ್ರಣಕ್ಕೆ ಗೃಹ ರಕ್ಷಣಾ ಸಿಬ್ಬಂದಿಗಳನ್ನು ನೇಮಿಸಲು ಅವಕಾಶ ನೀಡಲಾಗುವುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಿವೈಎಸ್‌ಪಿ ಮಂಜುನಾಥ ಕೆ. ಗಂಗಲ್, ಮಾಹಿತಿ ಹಾಗೂ ಸಾಕ್ಷಿಗಳ ಕೊರತೆಯಿಂದ ಅನೇಕ ಬಾರಿ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹಾಗಾಗಿ  ಸಾರ್ವಜನಿಕರು ಇಲಾಖೆಗೆ  ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನಗರಸಭೆ ಸದಸ್ಯರಾದ ಬಿ. ರೇವಣಸಿದ್ದಪ್ಪ, ಬಿ.ಕೆ. ಸೈಯದ್ ರೆಹಮಾನ್, ಮಹಮದ್‌ ಸಿಗ್ಬತ್‌ಉಲ್ಲಾ, ತಾಲ್ಲೂಕು ಪಂಚಾಯ್ತಿ ಎಚ್.ಎಚ್. ಬಸವರಾಜ್ ಹಾಗೂ ಗಣ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಿಪಿಐ ಲಕ್ಷ್ಮಣನಾಯ್ಕ್, ಪಿಎಸ್ಐಗಳಾದ ಹನುಮಂತಪ್ಪ ಎಂ. ಶಿರೀಹಳ್ಳಿ, ಸಿದ್ದೇಗೌಡ, ಎಚ್. ಸುನಿಲ್‌ಕುಮಾರ್ ಉಪಸ್ಥಿತರಿದ್ದರು. ನಗರಸಭೆ ಅಧ್ಯಕ್ಷೆ ಆಶಾ ಮರಿಯೋಜಿರಾವ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಎಂ. ಶ್ರೀದೇವಿ, ಮಲೇಬೆನ್ನೂರು ಪುರಸಭೆ ಅಧ್ಯಕ್ಷೆ ಅಂಜಿನಮ್ಮ   ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT