ಗುರುವಾರ, 28 ಮಾರ್ಚ್ 2024
ADVERTISEMENT
ಈ ಕ್ಷಣ :
ADVERTISEMENT
ADVERTISEMENT
ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್‌ ಹೃದಯಾಘಾತದಿಂದ ನಿಧನ
Last Updated 27 ಜುಲೈ 2017, 11:44 IST
ಅಕ್ಷರ ಗಾತ್ರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್‌. ಧರ್ಮ ಸಿಂಗ್‌ ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಲ್ಲಿನ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ಬೆಳಿಗ್ಗೆ 11.30ಕ್ಕೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ತುರ್ತು ಚಿಕಿತ್ಸೆಗಾಗಿ ಧರ್ಮ ಸಿಂಗ್‌ ಅವರನ್ನು ಆಸ್ಪತ್ರೆಗೆ ಬೆಳಿಗ್ಗೆ 9ಕ್ಕೆ ಕರೆತರಲಾಗಿತ್ತು. 11.30ಕ್ಕೆ ತೀವ್ರ ಹೃದಯಾಘಾತದಿಂದ ನಿಧನರಾದರು ಎಂದು ಎಂ.ಎಸ್. ರಾಮಯ್ಯ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಧರ್ಮ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
* 1936ರ ಡಿಸೆಂಬರ್ 25ರಂದು ಗುಲ್ಬರ್ಗಾ ಜಿಲ್ಲೆ ಜೇವರ್ಗಿ ತಾಲ್ಲೂಕು ನೆಲೋಗಿ ಗ್ರಾಮದಲ್ಲಿ ಜನಿಸಿದ್ದ ಧರ್ಮ ಸಿಂಗ್‌ ಅವರು, ಉಸ್ಮಾನಿಯಾ ವಿವಿಯಿಂದ ಎಂ.ಎ, ಎಲ್.ಎಲ್.ಬಿ. ಪದವಿ ಪಡೆದಿದ್ದರು. 2004ರಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು.
ಧರಂಸಿಂಗ್ ರಾಜಕೀಯ ಹಾದಿ
* 1960ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಅಲ್ಲಿಂದ ಕಾಂಗ್ರೆಸ್‌ಗೆ ನಿಷ್ಠಗಾಗಿ ದುಡಿರು.
* 1978ರಿಂದ 2008ರವರೆಗೂ ಶಾಸಕರಾಗಿದ್ದರು.
* 2004ರಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು.
* 2006-07ರಲ್ಲಿ ವಿಧಾನಸಭೆ ವಿಪಕ್ಷ ನಾಯಕರಾಗಿದ್ದರು.
* 2009-2014 ವರೆಗೆ ಬೀದರ್‌ನಿಂದ ಸಂಸದರಾಗಿ ಆಯ್ಕೆಯಾಗಿದ್ದರು.
* ದೇವರಾಜ್ ಅರಸ್, ಗುಂಡೂರಾವ್ ,ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ಗೃಹ, ಲೋಕೋಪಯೋಗಿ, ಅಬಕಾರಿ, ಸಮಾಜ ಕಲ್ಯಾಣ, ಕಂದಾಯ, ನಗರಾಭಿವೃದ್ದಿ ಖಾತೆಗಳ ನಿರ್ವಾಹಣೆ ಮಾಡಿದ್ದರು.
* 1996ರಿಂದ 1999ರ ವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು.
* ಸೀತರಾಮ್ ಕೇಸರಿ ಅವರ ಆಪ್ತರಾಗಿದ್ದರು. ವೀರೇಂದ್ರ ಪಾಟೀಲ್ ಅವರ ಬಳಿಕ ಗುಲ್ಬರ್ಗಾದಿಂದ ಸಿಎಂ ಆದ ರಾಜಕಾರಣಿ.
ಇದನ್ನೂ ಓದಿ...
* ಕಲಬುರ್ಗಿಯಲ್ಲಿನ ಧರ್ಮ ಸಿಂಗ್ ಮನೆಯಲ್ಲಿ ಶೋಕ; ಮಡುಗಟ್ಟಿದ ದುಃಖ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.
ADVERTISEMENT
ADVERTISEMENT
ADVERTISEMENT
ADVERTISEMENT