ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ವಿಶೇಷ ಕೃಷಿ ವಲಯ ಸ್ಥಾಪನೆ

Last Updated 27 ಜುಲೈ 2017, 7:09 IST
ಅಕ್ಷರ ಗಾತ್ರ

ಮಂಗಳೂರು: ವಿಶೇಷ ಆರ್ಥಿಕ ವಲ ಯದ ಮಾದರಿಯಲ್ಲೇ ಜಿಲ್ಲೆಯಲ್ಲಿ ವಿಶೇಷ ಕೃಷಿ ವಲಯ ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿ ಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ರೈತ ಮುಖಂಡರ ಸಭೆ ಯಲ್ಲಿ ಅವರು ಮಾತನಾಡಿದರು.

ಸಭೆ ಯಲ್ಲಿ ಮಾತನಾಡಿದ ರೈತ ಮುಖಂ ಡರು, ‘ಜಿಲ್ಲೆಯಲ್ಲಿ ಸ್ಥಳೀಯವಾಗಿ ಬೆಳೆದ ತರಕಾರಿಗಳಿಗೆ ಹಾಗೂ ಹೂವುಗಳಿಗೆ ವಿದೇಶದಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಕೃಷಿ ವಲಯ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ವಿಶೇಷ ಕೃಷಿ ವಲಯ ಸ್ಥಾಪನೆಯ ಸಾಧ್ಯ ತೆಗಳ ಬಗ್ಗೆ ಪರಿಶೀಲಿಸಿ, ವರದಿ ನೀಡಲು ಅಧಿಕಾರಿಗಳು, ಕೃಷಿ ತಜ್ಞರು ಮತ್ತು ರೈತ ಮುಖಂಡರ ಸಮಿತಿ ರಚಿಸಲಾಗುತ್ತಿದ್ದು, ಈ ಸಮಿತಿ ಎರಡು ತಿಂಗಳಲ್ಲಿ ವರದಿ ನೀಡಲಿದೆ. ಕೃಷಿ ವಲಯಕ್ಕೆ ಅಗತ್ಯವಿರು ವಷ್ಟು ಸೂಕ್ತ ಭೂಮಿ ಒದಗಿಸಲು ಜಿಲ್ಲಾ ಡಳಿತ ಸಿದ್ಧವಿದೆ’ ಎಂದು ತಿಳಿಸಿದರು.

ಯಶಸ್ವಿನಿ ಯೋಜನೆಯಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಂದ ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ಅಧಿಕ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯಡಿ ನೋಂದಾ ಯಿತ ಆಸ್ಪತ್ರೆಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳು ತಿಳಿಸಿದರು.

ತೋಟಗಾರಿಕಾ ಉತ್ಪನ್ನಗಳ ಸಂಸ್ಕ ರಣಾ ಘಟಕಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ಜಿಲ್ಲಾಮಟ್ಟದ ಕಾರ್ಯಾಗಾರ ವನ್ನು ಶೀಘ್ರವೇ ಆಯೋಜಿಸಲಾಗು ವುದು. ಬೆಳೆಗಳಿಗೆ ಹಳದಿ ರೋಗದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ಸುಳ್ಯದಲ್ಲಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲೂ ರೈತ ಮುಖಂಡರ ಸಭೆ ನಡೆಸಲು ಸಂಬಂಧಪಟ್ಟವರಿಗೆ ಸೂಚಿಸು ವುದಾಗಿ ಹೇಳಿದರು. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯ ಹೆಚ್ಚಿಸಲು ಸುಮಾರು ₹69 ಕೋಟಿ ವೆಚ್ಚದಲ್ಲಿ 53 ವೆಂಟೆಡ್ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾ ಯಿತಿಗಳ ವ್ಯಾಪ್ತಿಯಲ್ಲಿ 1ಸಾವಿರ ಸಣ್ಣ ಅಣೆಕಟ್ಟು ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ ಮಾತನಾಡಿ, ಕೃಷಿ ಯಂತ್ರಧಾರೆ ಕೇಂದ್ರ ಗಳ ಮೂಲಕ ಕೃಷಿ ಯಂತ್ರಗಳನ್ನು ರೈತರಿಗೆ ಬಾಡಿಗೆಗೆ ನೀಡಲಾಗುತ್ತಿದೆ. ಈ ಯಂತ್ರಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ 3 ಗ್ರಾಮ ಪಂಚಾಯಿತಿಗೆ ಒಂದರಂತೆ ಕೃಷಿ ಯಂತ್ರಧಾರೆ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಮೂಡುಬಿದಿರೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಿಸಲು ಈಗಾಗಲೇ ಜಮೀನು ಕೃಷಿ ಇಲಾಖೆಗೆ ಹಸ್ತಾಂತರವಾಗಿದ್ದು, ಮುಂದಿನ 1 ವರ್ಷದೊಳಗೆ ಕೇಂದ್ರ ನಿರ್ಮಿಸಲಾಗು ವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯ ದರ್ಶಿ ಎನ್.ಆರ್. ಉಮೇಶ್, ಪುತ್ತೂರು ಉಪವಿಭಾಗಾಧಿಕಾರಿ ಡಾ. ರಘುನಂದನ ಮೂರ್ತಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್. ಯೋಗೀಶ್, ಪಶುಸಂಗೋಪನೆ ಉಪನಿರ್ದೇಶಕ ತಿಪ್ಪೇಸ್ವಾಮಿ, ಸಹಕಾರ ಇಲಾಖೆ ಉಪ ಬಂಧಕ ಬಿ.ಕೆ. ಸಲೀಂ, ಲೀಡ್ ಬ್ಯಾಂಕ್ ಅಧಿಕಾರಿಗಳು, ರೈತ ಮುಖಂಡರಾದ ರವಿಕಿರಣ ಪುಣಚ, ಸಂಪತ್ ಸಾಮ್ರಾಜ್ಯ, ಯಾದವ ಶೆಟ್ಟಿ, ವಿವಿಧ ರೈತ ಸಂಘಟ ನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

* * 

ರೈತರಿಗೆ ಸಾಲ ಮಂಜೂರಾತಿಯಲ್ಲಿ ವಿಳಂಬ ಮಾಡುವ ಪ್ರಕರಣಗಳಿದ್ದರೆ, ಕೂಡಲೇ ಲೀಡ್ ಬ್ಯಾಂಕ್ ಅಧಿಕಾರಿಗಳ ಗಮನಕ್ಕೆ ತರಬೇಕು.
ಡಾ. ಕೆ.ಜಿ. ಜಗದೀಶ್‌
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT