ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ ನಿಯಂತ್ರಣಕ್ಕೆ ನೆರವಾಗಿ

Last Updated 27 ಜುಲೈ 2017, 8:46 IST
ಅಕ್ಷರ ಗಾತ್ರ

ಕೋಲಾರ: ‘ಅಪಘಾತಗಳ ಪ್ರಮಾಣ ತಗ್ಗಿಸಲು ವಾಹನ ಸವಾರರು ಇಲಾಖೆ ಜತೆ ಕೈಜೋಡಿಸಬೇಕು’ ಎಂದು ಹೆಚ್ಚು ವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಸಲಹೆ ನೀಡಿದರು. ಪೊಲೀಸ್‌ ಇಲಾಖೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಲಿಕಾ ಚಾಲನಾ ಪರವಾನಗಿ (ಎಲ್ಎಲ್ಆರ್) ವಿತರಣಾ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ‘ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ದರೆ ಅಪಘಾತಗಳ ಸಂಖ್ಯೆ ಕಡಿಮೆ ಯಾಗುತ್ತದೆ’ ಎಂದರು.

‘ಸಾಕಷ್ಟು ಸಂದರ್ಭಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತ ಗಳು ಸಂಭವಿಸುತ್ತವೆ. ಗಾಯಗೊಂಡ ವರಲ್ಲಿ ಹೆಚ್ಚಿನ ಮಂದಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಡುತ್ತಾರೆ. ಆದ ಕಾರಣ ಸಾರ್ವಜನಿಕರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಸಿಗುವಂತೆ ಮಾಡಬೇಕು. ಇದರಿಂದ ಸಾವು ನೋವು ಪ್ರಮಾಣ ಕಡಿಮೆ ಯಾಗುತ್ತದೆ’ ಎಂದು ಕಿವಿಮಾತು ಹೇಳಿದರು.

‘ ಹೆಚ್ಚು ವೇಗವಾಗಿ ವಾಹನ ಚಾಲನೆ ಮಾಡಬಾರದು. ಪಾದಚಾರಿಗಳ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ವಾಹನದ ದಾಖಲೆಪತ್ರಗಳನ್ನು ಕಾಲ ಕಾಲಕ್ಕೆ ನವೀಕರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ನಿರ್ಲಕ್ಷ್ಯವೇ ಕಾರಣ: ನಗರ ಸಂಚಾರ ಠಾಣೆ ಎಸ್‌ಐ ಜಗದೀಶ್ ಮಾತನಾಡಿ, ‘ನಗರದಲ್ಲಿ ವರ್ಷಕ್ಕೆ 150ಕ್ಕೂ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಚಾಲಕರ ನಿರ್ಲಕ್ಷ್ಯವೇ ಪ್ರಮುಖ ಕಾರಣ. ಸಂಚಾರ ನಿಯಮ ಉಲ್ಲಂಘಿಸಿ ಸಿಕ್ಕಿ ಬೀಳುವ ಚಾಲಕರ ಪೈಕಿ ಶೇ 70ರಷ್ಟು ಮಂದಿ ಬಳಿ ಚಾಲನಾ ಪರವಾನಗಿ ಇರುವುದಿಲ್ಲ.

ಹೀಗಾಗಿ ಚಾಲನಾ ಪರವಾನಗಿ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ 150 ಮಂದಿಗೆ ಎಲ್‌ಎಲ್‌ಆರ್‌ ವಿತರಣೆ ಮಾಡಲಾ ಯಿತು.  ಇನ್‌ಸ್ಪೆಕ್ಟರ್‌ ಲೋಕೇಶ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT