ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣದಲ್ಲಿ ಕಾರ್ಗಿಲ್‌ ವಿಜಯೋತ್ಸವ

Last Updated 27 ಜುಲೈ 2017, 9:18 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಿದರು. ಪಟಾಕಿ ಸಿಡಿಸಲಾಯಿತು. ಸಿಹಿ ವಿತರಣೆ ಮಾಡಲಾಯಿತು.

ಪಟ್ಟಣದ ಅಂಚೆ ಕಚೇರಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪದಾಧಿಕಾರಿಗಳು,  ‘ಇಂದು ಕಾರ್ಗಿಲ್ ಯುದ್ಧದಲ್ಲಿ ಭಾರತ ದಿಗ್ವಿಜಯ ಸಾಧಿಸಿದ ದಿನ. ಅಂದಿನ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣ ತೆತ್ತ ಸೈನಿಕರನ್ನು ನೆನೆಯುವುದು ಪ್ರತಿಯೊಬ್ಬರ ಕರ್ತವ್ಯ’ ಎಂದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್ ಗೌಡ ಮಾತನಾಡಿ, ‘ಭಾರತ ಪಾಕಿಸ್ತಾನದ ನಡುವೆ 60 ದಿನ ನಡೆದ ಯುದ್ಧದಲ್ಲಿ ಭಾರತದ 527 ಸೈನಿಕರು ಹತರಾಗಿದ್ದರು. ಇಂದು ಭಾರತ ದಿಗ್ವಿಜಯ ಸಾಧಿಸಿದ ದಿನ. ಈ ದಿನವನ್ನು ಎಲ್ಲರೂ ನೆನೆಯಬೇಕು. ಮಡಿದ ವೀರ ಯೋಧರಿಗೆ ನಮನ ಸಲ್ಲಿಸಬೇಕು’ ಎಂದರು.

‘ಈ ಧ್ಯೇಯ ಸಾಧನೆಯಲ್ಲಿ ನಮ್ಮ ಹಲವು ಧೀರೋದಾತ್ತ ಯೋಧರು  ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ. ದೇಶದ ಹಿತಕ್ಕಾಗಿ ದುಡಿಯುತ್ತಿರುವ ಯೋಧರು ಮಡಿದಾಗ ಅವರನ್ನೇ ನಂಬಿದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಇನ್ನೂ ಹೆಚ್ಚಿನ ಭದ್ರತೆ ನೀಡಬೇಕು ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ, ತಾಲ್ಲೂಕು ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್, ಬೇವೂರು ಸುನೀಲ್ ಕುಮಾರ್, ಸಿದ್ದನಹಳ್ಳಿ ಸಿದ್ದೇಗೌಡ, ಸಿದ್ದಪ್ಪ, ಯೋಗಾನಂದ್, ವಿನೋದ್, ರಾಘು, ದಿಲೀಪ್, ಬೋರಣ್ಣ, ಗುರುಗೌಡ, ಚಲುವರಾಜು, ಚನ್ನಪ್ಪ, ನಾಗೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT