ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ನುಸುಳಲು ಯತ್ನಿಸಿದ ಮೂವರು ಉಗ್ರರ ಹತ್ಯೆ

Last Updated 27 ಜುಲೈ 2017, 9:39 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್‌ನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಒಳ ನುಸುಳಲು ಯತ್ನಿಸಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಗುರುವಾರ ಹತ್ಯೆ ಮಾಡಿವೆ.

ಅನುಮಾನಾಸ್ಪದ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿವೆ. ಈ ವೇಳೆ, ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕೆಲವು ಮೂಲಗಳ ಪ್ರಕಾರ, ನುಸುಳುಕೋರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಈ ವರ್ಷ ಒಟ್ಟು 22 ಬಾರಿ ಅಕ್ರಮ ಒಳನುಸುಳುವಿಕೆ ಪ್ರಯತ್ನಗಳನ್ನು ತಡೆಯಲಾಗಿದೆ. 38 ನುಸುಳುಕೋರರನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT