ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲೋಗಿಯಲ್ಲೇ ಧರ್ಮಸಿಂಗ್ ಅಂತ್ಯಕ್ರಿಯೆ

Last Updated 27 ಜುಲೈ 2017, 13:23 IST
ಅಕ್ಷರ ಗಾತ್ರ

ಕಲಬುರ್ಗಿ: ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರ ಹುಟ್ಟೂರು ನೆಲೋಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಅಲ್ಲಿಯೇ ಅಂತ್ಯ ಸಂಸ್ಕಾರ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಜೇವರ್ಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಾದ ಬಳಿಕ ನೆಲೋಗಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿ, ಬಳಿಕ ನೆಲೋಗಿಯ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ಖಚಿತ ಪಡಿಸಿವೆ.

ಟೈರ್‌ಗೆ ಬೆಂಕಿ: ನೆಲೋಗಿಯಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ಅಲ್ಲಿನ ಗ್ರಾಮಸ್ಥರು ಜೇವರ್ಗಿ-ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT