ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಬಾ ಮಹಿಳಾ ಏಷ್ಯಾಕಪ್‌ ಬ್ಯಾಸ್ಕೆಟ್‌ಬಾಲ್‌ :ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ

Last Updated 27 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಫಿಬಾ ಮಹಿಳಾ ಏಷ್ಯಾಕಪ್‌ನಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಚಾಂಪಿಯನ್‌ಷಿಪ್‌ನಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿರುವ ಅನಿತಾ ಪಾಲ್‌ ದೊರೈ ಬಳಗ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ‘ಬಿ’ ಡಿವಿಷನ್‌ನ ಕ್ವಾರ್ಟರ್ ಫೈನಲ್‌ ಹಣಾಹಣಿಯಲ್ಲಿ ಆತಿಥೇಯ ಭಾರತ 93–51 ಪಾಯಿಂಟ್ಸ್‌ನಿಂದ ಫಿಜಿ ವಿರುದ್ಧ ಸುಲಭ ಗೆಲುವು ದಾಖಲಿಸಿತು.

ಗುಂಪು ಹಂತದಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಗೆದ್ದು ವಿಶ್ವಾಸದಿಂದ ಪುಟಿಯುತ್ತಿದ್ದ ಭಾರತದ ವನಿಯಯರು ಫಿಜಿ ವಿರುದ್ಧದ ಹಣಾಹಣಿಯಲ್ಲೂ ಆರಂಭದಿಂದಲೇ ಆಕ್ರಮಣಕಾರಿ ಆಟ ಆಡಿ ತವರಿನ ಅಭಿಮಾನಿಗಳನ್ನು ರಂಜಿಸಿದರು.

ಭಾರತದ ಪರ ನಾಯಕಿ ಅನಿತಾ ಮಿಂಚಿದರು. ಫಿಜಿ ತಂಡದ ರಕ್ಷಣಾ ವಿಭಾಗಕ್ಕೆ ಸವಾಲಾದ ಅವರು 19 ಪಾಯಿಂಟ್ಸ್‌ ಹೆಕ್ಕಿದರು. ಗ್ರಿಮಾ ಮರ್ಲಿನ್‌ ವರ್ಗೀಸ್‌ ಅವರು 15 ಪಾಯಿಂಟ್ಸ್‌ ಕಲೆಹಾಕಿದರೆ, ಪೂನಂ ಚತುರ್ವೇದಿ ಹಾಗೂ ರಾಜಪ್ರಿಯದರ್ಶಿನಿ ಅವರು ತಲಾ 10 ಪಾಯಿಂಟ್ಸ್‌ ಸಂಗ್ರಹಿಸಿ ತಂಡದ ಗೆಲುವಿನ ಅಂತರ ಹೆಚ್ಚಿಸಿದರು.

ಶುಕ್ರವಾರ ನಡೆಯುವ ಸೆಮಿಫೈನಲ್‌ ಹಣಾಹಣಿಯಲ್ಲಿ ಭಾರತ ತಂಡ ಲೆಬನಾನ್‌ ಸವಾಲು ಎದುರಿಸಲಿದೆ. ದಿನದ ಇನ್ನೊಂದು ಪಂದ್ಯದಲ್ಲಿ ಲೆಬನಾನ್‌ 86–37ರಲ್ಲಿ ಶ್ರೀಲಂಕಾ ತಂಡದ ಸವಾಲು ಮೀರಿ ನಿಂತಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT