ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪನಾಮಾ ಪೇಪರ್ಸ್‌ :ವಿಚಾರಣೆ ಅಂತ್ಯ

Last Updated 27 ಜುಲೈ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌:  ಪಾಕಿಸ್ತಾನದ ಪ್ರಧಾನಿ ನವಾಜ್‌ ಷರೀಫ್‌ ಹಾಗೂ ಅವರ ಕುಟುಂಬದ ವಿರುದ್ಧದ ಪನಾಮಾ ಪೇಪರ್ಸ್‌ ಪ್ರಕರಣದ ವಿಚಾರಣೆಯನ್ನು ಇಲ್ಲಿನ ಸುಪ್ರೀಂ ಕೋರ್ಟ್‌ ಗುರುವಾರ ಮುಕ್ತಾಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

ಈ  ತೀರ್ಪು ನವಾಜ್‌ ಷರೀಫ್‌ ಅವರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಯಾವ ದಿನಾಂಕದಂದು ತೀರ್ಪು ಪ್ರಕಟಿಸಲಾಗುವುದು ಎಂಬುದನ್ನು ಪೀಠ ತಿಳಿಸಿಲ್ಲ.

ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮ ಪೇಪರ್ಸ್‌ ಸೋರಿಕೆಯಿಂದ ಬಹಿರಂಗಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT