ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪನಾಮಾ ಪೇಪರ್ಸ್‌ ಪ್ರಕರಣ: ಪಾಕಿಸ್ತಾನ ಪ್ರಧಾನಿ ನವಾಜ್‌ ಷರೀಫ್‌ ದೋಷಿ; ರಾಜೀನಾಮೆ ಅನಿವಾರ್ಯ

Last Updated 28 ಜುಲೈ 2017, 7:57 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪನಾಮ ಪೇಪರ್ಸ್‌ ಪ್ರಕರಣದಲ್ಲಿ ಪ್ರಧಾನಿ ನವಾಜ್‌ ಷರೀಪ್ ದೋಷಿ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ತೀರ್ಪು ನೀಡಿದ್ದು, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ.

ಪ್ರಧಾನಿ ನವಾಜ್‌ ಷರೀಫ್‌ ಹಾಗೂ ಅವರ ಕುಟುಂಬದ ವಿರುದ್ಧದ ಪನಾಮಾ ಪೇಪರ್ಸ್‌ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಸುಪ್ರೀಂ ಕೋರ್ಟ್‌ ನವಾಜ್‌ ಷರೀಫ್‌ ಅವರನ್ನು ದೋಷಿ ಎಂದು ಮಹತ್ವದ ಐತಿಹಾಸಿಕ ತೀರ್ಪು ಪ್ರಕಟಿಸಿತು.

ಪ್ರಕರಣ ಕುರಿತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ಮುಕ್ತಾಯಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಪ್ರಕರಣದಲ್ಲಿ ನವಾಜ್‌ ಷರೀಫ್‌ ದೋಷಿ ಎಂದು ತೀರ್ಪು ನೀಡಿದ್ದು, ಪ್ರಧಾನಿ ಹುದ್ದೆಯಿಂದ ಪದತ್ಯಾಗ ಮಾಡುವಂತೆ ಸೂಚನೆ ನೀಡಿ ಆದೇಶಿಸಿದೆ. 

ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮ ಪೇಪರ್ಸ್‌ ಸೋರಿಕೆಯಿಂದ ಬಹಿರಂಗಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT