ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಿಗರ ಹೋರಾಟಕ್ಕೆ ಮಣಿದ ನಮ್ಮ ಮೆಟ್ರೊ: ಹಿಂದಿ ಫಲಕಗಳ ತೆರವು

Last Updated 4 ಆಗಸ್ಟ್ 2017, 9:15 IST
ಅಕ್ಷರ ಗಾತ್ರ
ADVERTISEMENT

ಬೆಂಗಳೂರು: ನಮ್ಮ ಮೆಟ್ರೊದಲ್ಲಿ ಹಿಂದಿ ಹೇರಿಕೆ ಖಂಡಿಸಿ ಕನ್ನಡಿಗರು ನಡೆಸಿದ ಹೋರಾಟದ ಫಲವಾಗಿ ಮೆಟ್ರೊದಲ್ಲಿನ ಹಿಂದಿ ಫಲಕಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

ಕೊನೆಗೂ ಕನ್ನಡಿಗರ ಹೋರಾಟಕ್ಕೆ ಮಣಿದ ನಮ್ಮ ಮೆಟ್ರೊ ಹಿಂದಿ ಫಲಕಗಳನ್ನು ತೆರವುಗೊಳಿಸಲು ಮುಂದಾಗಿದೆ.

[related]‍‍‍‍

ನಗರದ ಕೆಲವು ನಿಲ್ದಾಣಗಳಲ್ಲಿ ಇರುವ ಹಿಂದಿ ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ನಿಲ್ದಾಣದ ಮುಖ್ಯ ದ್ವಾರದಲ್ಲಿನ ನಾಮಫಲಕಗಳನ್ನು ತೆರವುಗೊಳಿಸಿ ಹೊಸದಾಗಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುವ ನಾಮಫಲಕಗಳನ್ನು ಬರೆಸಲಾಗುತ್ತಿದೆ.

ಮೆಟ್ರೊದಲ್ಲಿ ಹಿಂದಿ ಹೇರಿಕೆ ಖಂಡಿಸಿ  ಕನ್ನಡಪರ ಸಂಘಟನೆಗಳು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದ್ದರು. ನೆಟ್ಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

ಹಿಂದಿ ಹೇರಿಕೆಯನ್ನು ರಾಜ್ಯ ಸರ್ಕಾರ  ಕೂಡ ಖಂಡಿಸಿತ್ತು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು.

[related]

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT