ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ ಚುನಾವಣೆ: ಶೇಕಡ 98.21 ಮತದಾನ

Last Updated 5 ಆಗಸ್ಟ್ 2017, 13:00 IST
ಅಕ್ಷರ ಗಾತ್ರ

ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗೆ ಶನಿವಾರ ನಡೆದ ಮತದಾನದಲ್ಲಿ ಶೇಕಡ 98.21ರಷ್ಟು ಮತದಾನವಾಗಿದೆ. ಒಟ್ಟು 785 ಸಂಸದರ ಪೈಕಿ 771 ಮಂದಿ ಮತದಾನ ಮಾಡಿದ್ದಾರೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಮುಕುಲ್‌ ಪಾಂಡೆ ತಿಳಿಸಿದ್ದಾರೆ.

ಮತ ಎಣಿಕೆ ಪ್ರಕ್ರಿಯೆ ಸಂಜೆ ಆರು ಗಂಟೆಗೆ ಆರಂಭವಾಗಿದ್ದು, 7.15ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಉಪರಾಷ್ಟ್ರಪತಿ ಆಯ್ಕೆಗೆ ಎಂ. ವೆಂಕಯ್ಯ ನಾಯ್ಡು ಅವರನ್ನು ಎನ್‌ಡಿಎ ಕಣಕ್ಕಿಳಿಸಿದ್ದರೆ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಚುನಾಯಿತ ಸದಸ್ಯರಿಗೆ ಮಾತ್ರ ಮತದಾನದ ಹಕ್ಕು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT