ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ. ರಾಧಾಕೃಷ್ಣ, ಸತ್ಯಮಂಗಲಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

Last Updated 5 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಮೂಡುಬಿದಿರೆ: ಇಲ್ಲಿಯ ವರ್ಧಮಾನ ಪ್ರಶಸ್ತಿ ಪೀಠವು 2016ರ ಸಾಲಿನಲ್ಲಿ ವರ್ಷದ ಶ್ರೇಷ್ಠ ಕನ್ನಡ ಸಾಹಿತ್ಯ ಕೃತಿಗೆ ನೀಡುವ ವರ್ಧಮಾನ ಸಾಹಿತ್ಯ ಪ್ರಶಸ್ತಿಯನ್ನು ಬೆಂಗಳೂರಿನ ಪ್ರೊ. ಕೆ.ಇ.ರಾಧಾಕೃಷ್ಣ ಅವರ ‘ಕಣ್ಣಕಾಡು’ ಎನ್ನುವ ಮಹಾಕಾವ್ಯಕ್ಕೆ ಮತ್ತು ವರ್ಷದ ಶ್ರೇಷ್ಠ ವರ್ಧಮಾನ ಉದಯೋನ್ಮುಖ ಸಾಹಿತ್ಯ ಕೃತಿಗೆ ನೀಡುವ ಪ್ರಶಸ್ತಿಯನ್ನು ಬೆಂಗಳೂರಿನ ಸತ್ಯಮಂಗಲ ಆರ್. ಮಹಾದೇವ ಅವರ ‘ಹೆಜ್ಜೆ ಮೂಡಿದ ಮೇಲೆ’ ಎನ್ನುವ ಕಾವ್ಯ ಕೃತಿಗೆ ನೀಡಲು ನಿರ್ಧರಿಸಿದೆ.


ಪೀಠದ ಅಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ.ನಾ.ಮೊಗಸಾಲೆ ತಿಳಿಸಿದ್ದಾರೆ.


ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯುವ ದಸರಾ ಸಾಹಿತ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವರ್ಧಮಾನ ಸಾಹಿತ್ಯ ಪ್ರಶಸ್ತಿಯು ₹25 ಸಾವಿರ ಮತ್ತು ವರ್ಧಮಾನ ಉದಯೋನ್ಮುಖ ಸಾಹಿತ್ಯ  ಪ್ರಶಸ್ತಿಯು ₹15 ಸಾವಿರದ ಗೌರವ ಸಂಭಾವನೆ ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT