ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರವಿಚಂದ್ರನ್‌ ಪುತ್ರ ವಿಕ್ರಮ್‌ ಅಭಿನಯದ ಮೊದಲ ಚಿತ್ರದ ಟೀಸರ್‌ ಬಿಡುಗಡೆ

Last Updated 17 ಆಗಸ್ಟ್ 2017, 11:36 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ನಟ ರವಿಚಂದ್ರನ್‌ ಅವರ ಮಗ ವಿಕ್ರಮ್‌ ಅಭಿನಯದ ‘ನವೆಂಬರ್‌ನಲ್ಲಿ ನಾನು ಅವಳು’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. 

ವಿಕ್ರಮ್‌ ಹುಟ್ಟುಹಬ್ಬದ ವಿಶೇಷವಾಗಿ ‘ನವೆಂಬರ್‌ನಲ್ಲಿ ನಾನು ಅವಳು’ ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಯಿತು. ಟೀಸರ್‌ನಲ್ಲಿ ವಿಕ್ರಮ್‌ ಸ್ಟೈಲಿಶ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ವೀಕ್ಷಕರಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.

ನಾಗಶೇಖರ್‌ ನಿರ್ದೇಶನವಿರುವ ಈ ಚಿತ್ರ ಆರ್‌.ಎಸ್‌. ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ಜತೆಗೆ ಅರ್ಜುನ್‌ ಜನ್ಯ ಸಂಗೀತ ಹಾಗೂ ಸತ್ಯ ಹೆಗಡೆ ಅವರ ಛಾಯಾಗ್ರಹಣ ಟೀಸರ್‌ನಲ್ಲಿ ಗಮನ ಸೆಳೆಯುತ್ತದೆ. ಈ ಚಿತ್ರದ ಮೂಲಕ ವಿಕ್ರಮ್‌ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT