ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಮಾಹಿತಿ ಬಯಸಿರುವ ಸುಪ್ರೀಂ ಕೋರ್ಟ್‌

Last Updated 18 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಂಬಂಧಿಯಿಂದಲೇ ನಿರಂತರ ಅತ್ಯಾಚಾರಕ್ಕೆ ಒಳಗಾಗಿ ಗುರುವಾರ ಹೆಣ್ಣುಮಗುವೊಂದಕ್ಕೆ ಜನ್ಮ ನೀಡಿರುವ 10 ವರ್ಷದ ಚಂಡೀಗಡದ ಬಾಲಕಿಗೆ ₹10ಲಕ್ಷ ಪರಿಹಾರ ನೀಡುವ ಸಂಬಂಧ ಕೇಂದ್ರ ಮತ್ತು ಚಂಡೀಗಡ ಸರ್ಕಾರದಿಂದ ಸುಪ್ರೀಂಕೋರ್ಟ್‌ ಉತ್ತರ ಬಯಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.

ತಮ್ಮ ಮಗಳಿಗೆ ಗರ್ಭಪಾತ ಮಾಡಲು ಅನುಮತಿ ನೀಡುವಂತೆ ಕೋರಿ ಕಳೆದ ತಿಂಗಳು ಬಾಲಕಿಯ ಪೋಷಕರು ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್‌ ಗರ್ಭಪಾತಕ್ಕೆ ಅನುಮತಿ ನೀಡಿರಲಿಲ್ಲ. ಬಾಲಕಿ ಈಗ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಪ್ರಕರಣದಲ್ಲಿ ಬಾಲಕಿಯ ಪರ ವಾದಿಸುತ್ತಿರುವ ವಕೀಲರಾದ ಇಂದಿರಾ ಜೈಸಿಂಗ್‌, ಮಗುವಿನ ಲಾಲನೆ ಪಾಲನೆ ಮಾಡಲು ಮಗುವಿಗೆ 10ಲಕ್ಷ ರೂಪಾಯಿ ಪರಿಹಾರ ನೀಡುವ ಅಗತ್ಯವಿದೆ ಎಂದು ಶುಕ್ರವಾರ ಕೋರ್ಟ್‌ ಗಮನಕ್ಕೆ ತಂದರು. ಇದೇ ರೀತಿಯ ಪ್ರಕರಣದಲ್ಲಿ ಈಗಾಗಲೇ ಬಾಲಕಿಯೊಬ್ಬಳಿಗೆ ಪರಿಹಾರ ನೀಡಿರುವ ಬಗ್ಗೆ ಉಲ್ಲೇಖಿಸಿದ ವಕೀಲರು, ಅದೇ ತೀರ್ಪನ್ನು ಈ ಪ್ರಕರಣಕ್ಕೂ ಅನ್ವಯ ಮಾಡುವಂತೆ ಕೋರಿದರು.

ಆದ್ದರಿಂದ ಕೋರ್ಟ್‌ ಈ ಸಂಬಂಧ ಸರ್ಕಾರಗಳಿಂದ ಮಾಹಿತಿ ಬಯಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT