ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರಕವಾಗಿ ಜಯಾ ಮನೆ ದೀಪಾ ವಿರೋಧ

Last Updated 18 ಆಗಸ್ಟ್ 2017, 19:31 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಪೋಯಸ್‌ ಗಾರ್ಡನ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅವರ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಅವರ ಸೋದರನ ಮಗಳು ಜೆ. ದೀಪಾ ವಿರೋಧ ವ್ಯಕ್ತಪಡಿಸಿದ್ದು, ಇದರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ಮದ್ರಾಸ್‌ ಹೈಕೋರ್ಟ್‌ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಹಾಗೂ ಪೋಯಸ್‌ ಗಾರ್ಡನ್‌ನಲ್ಲಿರುವ ‘ವೇದ ನಿಲಯಂ’ನ್ನು ಸ್ಮಾರಕವಾಗಿ ಪರಿವರ್ತಿಸುವುದಾಗಿ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಗುರುವಾರ ಘೋಷಿಸಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ದೀಪಾ, ಪೋಯಸ್‌ ನ ಆಸ್ತಿ ಹೊಂದುವ ವಿಚಾರದಲ್ಲಿ ನಾನು ‘ನೈತಿಕ ಹಾಗೂ ಕಾನೂನು ಹಕ್ಕು’ ಹೊಂದಿದ್ದೇನೆ. ಈಗ ಸ್ಮಾರಕವಾಗಿ ಪರಿವರ್ತಿಸುತ್ತಿರುವ ಮುಖ್ಯಮಂತ್ರಿಯವರು ನಾಟಕ ವಾಡುತ್ತಿದ್ದು, ಇದರ ಹಿಂದೆ ಯಾವುದೋ ಉದ್ದೇಶವಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT