ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕೊದಲ್ಲಿ ಚೂರಿ ಇರಿತ ಹೊಣೆ ಹೊತ್ತ ಐಎಸ್

Last Updated 19 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾದ ಸುರ್ಗುಟ್‌ ನಗರದಲ್ಲಿ ವ್ಯಕ್ತಿಯೊಬ್ಬ ಎಂಟು ಜನರಿಗೆ ಚೂರಿಯಿಂದ ಇರಿದಿದ್ದು, ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ಈತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ದಾಳಿಯ ಹೊಣೆಯನ್ನು ಐಎಸ್ ಉಗ್ರರು ಹೊತ್ತುಕೊಂಡಿದ್ದಾರೆ. ಇದೊಂದು ಉಗ್ರರ ಕೃತ್ಯ ಎಂಬುದನ್ನು ಪೊಲೀಸರು ಈ ಮೊದಲು ಅಲ್ಲಗಳೆದಿದ್ದರು.

‘ಸೆಂಟ್ರಲ್‌ ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದೆ. ದಾಳಿ ಮಾಡಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆತ ಸ್ಥಳೀಯ ನಿವಾಸಿ. ಈತನ ಮಾನಸಿಕ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ. ಇರಿತಕ್ಕೊಳಗಾದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಐವರು ಸುಧಾರಿಸಿಕೊಂಡಿದ್ದಾರೆ.

ಟುರ್ಕು: ಐವರ ಬಂಧನ
ಫಿನ್ಲೆಂಡ್:‌
ಇಬ್ಬರ ಸಾವಿಗೆ ಕಾರಣವಾದ ಚೂರಿ ಇರಿತ ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ  ಐವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದೊಂದು ಭಯೋತ್ಪಾದನಾ ಕೃತ್ಯ ಎಂದು ಪೊಲಿಸರು ಹೇಳಿದ್ದಾರೆ.

‘ಪ್ರಕರಣದ ಪ್ರಮುಖ ಆರೋಪ ಮತ್ತು ಇತರ ಐವರನ್ನು ಬಂಧಿಸಿದ್ದೇವೆ’ ಎಂದು ತನಿಖಾ ಅಧಿಕಾರಿ ಮಾರ್ಕುಸ್‌ ಲೈನೆ ಹೇಳಿದ್ದಾರೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಸ್ಥಿತಿಯಲ್ಲಿರುವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಈ ದಾಳಿಯ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ಪೊಲೀಸರಿಗೆ ತಿಳಿದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT