ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್‌ ವಿರುದ್ಧ ತನಿಖೆ

Last Updated 19 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಇನ್ಫೊಸಿಸ್‌ ಕಂಪೆನಿಯು ಹೂಡಿಕೆದಾರರ ಭದ್ರತೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಮಾಡಿದೆ ಎನ್ನುವ ಆರೋಪ ಕೇಳಿಬಂದಿದೆ. ಹೀಗಾಗಿ,  ಕಂಪೆನಿ, ಅದರ ಕೆಲವು ಅಧಿಕಾರಿಗಳು ಹಾಗೂ ನಿರ್ದೇಶಕರ ವಿರುದ್ಧ ತನಿಖೆ ನಡೆಸುತ್ತಿರುವುದಾಗಿ ಅಮೆರಿಕದ ಪ್ರಮುಖ ನಾಲ್ಕು ಕಾನೂನು ಸಂಸ್ಥೆಗಳು ಹೇಳಿವೆ.

ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಗೆ ವಿಶಾಲ್ ಸಿಕ್ಕಾ ಅವರು ರಾಜೀನಾಮೆ ನೀಡದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇನ್ಫೊಸಿಸ್‌ ಕಂಪೆನಿಯು ಅಮೆರಿಕದ ಷೇರುಪೇಟೆಯಲ್ಲಿಯೂ ವಹಿವಾಟು ನಡೆಸುತ್ತಿದೆ. ಹೂಡಿಕೆದಾರರ ಸುರಕ್ಷತಾ ನಿಯಮ ಉಲ್ಲಂಘನೆ ಮತ್ತು ವಹಿವಾಟಿಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ನೀಡುವ ಮೂಲಕ ದಾರಿ ತಪ್ಪಿಸಲಾಗಿದೆ ಎಂದು ಹೂಡಿಕೆದಾರರು ದೂರು ನೀಡಿರುವುದರಿಂದ ತನಿಖೆ ನಡೆಸಲಾಗುತ್ತಿದೆ ಎಂದು ಸಂಸ್ಥೆಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT